ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಏನೇನು ಘೋಷಿಸಿದ್ರು ಯಡಿಯೂರಪ್ಪ?

Last Updated 5 ಮಾರ್ಚ್ 2020, 9:40 IST
ಅಕ್ಷರ ಗಾತ್ರ

ರಾಜ್ಯದ ಆರ್ಥಿಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್‌ನಲ್ಲಿ ಏನೇನುಯೋಜನೆಗಳನ್ನು ಘೋಷಿಸಿದ್ದಾರೆ?ಎಷ್ಟುಅನುದಾನವನ್ನು ಘೋಷಿಸಿದ್ದಾರೆ?ಮಾಹಿತಿ ಇಲ್ಲಿದೆ:

* ಆರ್ಥಿಕ ಅಭಿವೃದ್ಧಿಗೆ ವಲಯಕ್ಕೆ ಘೋಷಿಸಲಾದ ಒಟ್ಟು ಅನುದಾನ ₹ 55,732 ಕೋಟಿ

* ರಾಜ್ಯದಲ್ಲಿ ಹೂಡಿಕೆದಾರರಿಗೆ ಉತ್ತೇಜನ ನೀಡಲು, ಕೈಗಾರಿಕೆ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿಗೆ ಕ್ರಮ

* 2020ರ ನವೆಂಬರ್‌ನಲ್ಲಿ ‘ಇನ್ವೆಸ್ಟ್ ಕರ್ನಾಟಕ-2020’ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ

* ‘ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ’ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ‘ಹೆಲ್ತ್ ಅಂಡ್ ವೆಲ್‌ನೆಸ್ ಕ್ಲಸ್ಟರ್’ ಮತ್ತು ಧಾರವಾಡ ಜಿಲ್ಲೆಯಲ್ಲಿ ‘ಹೋಮ್ ಅಂಡ್ ಪರ್ಸನಲ್ ಕೇರ್ ಕನ್‌ಸ್ಯೂಮರ್ ಗೂಡ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಸ್ಥಾಪನೆ

* ರಾಮನಗರ ತಾಲ್ಲೂಕಿನ ಹಾರೋಹಳ್ಳಿ 5ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ‘ಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಸ್ಥಾಪನೆಗೆ ₹ 10 ಕೋಟಿ ಅನುದಾನ

* ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹರಳೂರು-ಮುದ್ದೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ‘ಡಿಫೆನ್ಸ್ ಅಂಡ್ ಏರೋಸ್ಪೇಸ್ ಎಕ್ಯುಪ್‍ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಸ್ಥಾಪನೆ.

* ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆ.

* ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕೈಗಾರಿಕೆಗಳ ಸಹಯೋಗದೊಂದಿಗೆ ‘ಸೆಂಟರ್ ಫಾರ್ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್’ ಸ್ಥಾಪನೆಗೆ ₹ 5 ಕೋಟಿ ಅನುದಾನ

* ನಾರು ಆಧಾರಿತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಮತ್ತು ವ್ಯಾಪಕ ಮಾರುಕಟ್ಟೆ ಒದಗಿಸಲು ₹ 5 ಕೋಟಿ ವೆಚ್ಚದಲ್ಲಿ ‘ಕಾಯಿರ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಸ್ಥಾಪನೆ.

* ತಿಪಟೂರಿನಲ್ಲಿ ‘ತೆಂಗು ಆಧಾರಿತ ಕೈಗಾರಿಕಾ ಪಾರ್ಕ್’ ಅಭಿವೃದ್ಧಿ

* ಕೇಂದ್ರ ಸರ್ಕಾರದ ‘ಪವರ್‌ಟೆಕ್ಸ್ ಇಂಡಿಯಾದ ನೂಲು ನಿಧಿ ಯೋಜನೆ’ಯಡಿ ಕೇಂದ್ರ ಸರ್ಕಾರದ ವಂತಿಗೆ ಹಾಗೂ ರಾಜ್ಯ ಸರ್ಕಾರದ ಗರಿಷ್ಠ ₹ 50 ಲಕ್ಷ ಸಹಾಯಧನದೊಂದಿಗೆ ಎರಡು ಕೇಂದ್ರಗಳಲ್ಲಿ ನೂಲಿನ ಘಟಕ ಸ್ಥಾಪನೆ

* ಹೊಸ ಜವಳಿ ಮತ್ತು ಸಿದ್ಧ ಉಡುಪು ನೀತಿಯ ಪ್ರೋತ್ಸಾಹಕಗಳಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರ್ಪಡೆ

* ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಪ್ರಾರಂಭ, 3000 ಉದ್ಯೋಗ ಸೃಷ್ಟಿ

* ರಾಜ್ಯದ ಜಿ.ಐ. ಟ್ಯಾಗ್ ಹೊಂದಿರುವ ಕೈಮಗ್ಗ ಬಟ್ಟೆ ಉತ್ಪನ್ನಗಳಿಗೆ ರಾಜ್ಯದ ಪ್ರತಿಷ್ಠಿತ ‘ಪ್ರಿಯದರ್ಶಿನಿ’ ಬ್ರಾಂಡ್ ಮೂಲಕ ಮಾರುಕಟ್ಟೆ ಸೌಲಭ್ಯ

* ಹಿಂದುಳಿದ ಪ್ರದೇಶಗಳು ಮತ್ತು ಎರಡನೇ ಮತ್ತು ಮೂರನೇ ಸ್ತರದ ನಗರಗಳಿಗೆ ಬಂಡವಾಳ ಆಕರ್ಷಿಸುವ ನೂತನ ಕೈಗಾರಿಕಾ ನೀತಿ ಜಾರಿ. ಉದ್ಯೋಗ ಸೃಷ್ಟಿಗೆ ಆದ್ಯತೆ

* ಬೆಂಗಳೂರಿನ ಆನಂದರಾವ್ ವೃತ್ತದಲ್ಲಿ ₹ 400 ಕೋಟಿ ವೆಚ್ಚದಲ್ಲಿ ಸರ್ಕಾರಿ ಕಚೇರಿಗಳಿಗಾಗಿ 25 ಅಂತಸ್ತುಗಳ ಬಹುಮಹಡಿಯ ‘ಅವಳಿ ಗೋಪುರ’ ನಿರ್ಮಾಣ-ಯೋಜನಾ ವರದಿ ತಯಾರಿಕೆಗೆ ಕ್ರಮ

* ಖಾಸಗಿ ಸಹಭಾಗಿತ್ವದಲ್ಲಿ ₹ 2500 ಕೋಟಿ ವೆಚ್ಚದಲ್ಲಿ ಉತ್ತರ ಕನ್ನಡ ಜಿಲ್ಲೆ ಪಾವಿನಕುರ್ವೆ/ ಬೇಲೆಕೇರಿ ಬಂದರು ಅಭಿವೃದ್ಧಿಗೆ ಬಿಡ್ ಆಹ್ವಾನ

* ₹ ಕೋಟಿ ವೆಚ್ಚದಲ್ಲಿ ‘ಇನ್ನೋವೇಷನ್ ಹಬ್’ (Innovation Hub) ಸ್ಥಾಪನೆ

* ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲು, ವಿದೇಶಿ ಸರ್ಕಾರ ಮತ್ತು ಕಂಪನಿಗಳೊಂದಿಗೆ ಸಂಬಂಧಗಳನ್ನು ಬಲಪಡಿಸಲು ₹ 7 ಕೋಟಿ ವೆಚ್ಚದಲ್ಲಿ ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ

* ನವೋದ್ಯಮಗಳ ವೇಗ ವರ್ಧಿಸಲು ಹಾಗೂ ಮಾರುಕಟ್ಟೆ ಪ್ರವೇಶಕ್ಕೆ ನೆರವಾಗಲು ಉದ್ಯಮದವರ ಸಹಯೋಗದೊಂದಿಗೆ ‘ಆ್ಯಕ್ಸಿಲರೇಷನ್ ಪ್ರೋಗ್ರಾಂ’ ಪ್ರಾರಂಭಿಸಲು ₹ 3ಕೋಟಿ ಅನುದಾನ

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT