ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್ 2020: ಬೆಲೆ ಏರಿಕೆಯೇ ಹೆಚ್ಚು, ಇಳಿಕೆಗೆ ಒಲವು ತೋರದ ಯಡಿಯೂರಪ್ಪ

ಯಾವುದು ಅಗ್ಗ, ಯಾವುದು ದುಬಾರಿ?
Last Updated 5 ಮಾರ್ಚ್ 2020, 8:48 IST
ಅಕ್ಷರ ಗಾತ್ರ

ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ವಸ್ತು, ಸೇವೆಗಳ ಬೆಲೆ ಏರಿಕೆಗೇ ಹೆಚ್ಚು ಒಲವು ತೋರಲಾಗಿದೆ. ಬೆಲೆ ಇಳಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸಕ್ತಿ ತೋರಿಲ್ಲ.

ಅಧಿಕ ಸಂಪನ್ಮೂಲ ಕ್ರೂಡೀಕರಣದ ನೆಪವೊಡ್ಡಿ ತೆರಿಗೆ ಹೆಚ್ಚಿಸಲಾಗಿದೆ.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ಪೆಟ್ರೋಲ್, ಡೀಸೆಲ್ ಮೆಲಿನ ತೆರಿಗೆ ಪ್ರಮಾಣವನ್ನು ಕ್ರಮವಾಗಿ ಶೇ 32ರಿಂದ 35 ಮತ್ತು ಶೇ 21ರಿಂದ 24ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹1.60 ಮತ್ತು ಪ್ರತಿ ಲೀಟರ್ ಡಿಸೇಲ್ ದರ ₹1.59 ಏರಿಕೆಯಾಗಲಿದೆ.

ಮದ್ಯವೂ ದುಬಾರಿ

ಮದ್ಯದ ಎಲ್ಲ 18 ಘೋಷಿತ ಬೆಲೆ ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 6ರಷ್ಟು ಹೆಚ್ಚಿಸಲಾಗಿದೆ.

ಮುದ್ರಾಂಕ ಶುಲ್ಕ ಇಳಿಕೆ

₹ 20 ಲಕ್ಷಕ್ಕಿಂತ ಕಡಿಮೆ ಮೌಲ್ಯದ ಅಪಾರ್ಟ್‍ಮೆಂಟ್‍ಗಳ ಮೊದಲನೇ ನೋಂದಣಿ ಮುದ್ರಾಂಕ ಶುಲ್ಕ ಶೇ 5ರಿಂದ ಶೇ 2ಕ್ಕೆ ಇಳಿಕೆ ಮಾಡಲಾಗಿದೆ. ಆದರೆ, ₹ 20 ಲಕ್ಷಕ್ಕಿಂತ ಕಡಿಮೆ ಮೌಲ್ಯ ಎಂದು ಉಲ್ಲೇಖಿಸಿರುವುದರಿಂದ ಈ ಶುಲ್ಕ ಕಡಿತದಿಂದ ರಿಯಲ್ ಎಸ್ಟೇಟ್ ವಲಯಕ್ಕೆ ಹೆಚ್ಚಿನ ಪ್ರಯೋಜನ ದೊರೆಯದು ಎನ್ನಲಾಗುತ್ತಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT