ಭಾನುವಾರ, ಏಪ್ರಿಲ್ 18, 2021
24 °C

ಸವಾಲುಗಳನ್ನೇ ಅವಕಾಶಗಳನ್ನಾಗಿಸಲು ಯತ್ನಿಸಿದ್ದೇವೆ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಂಕಷ್ಟಗಳಿಗೆ ಜಗ್ಗದೇ ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕೋವಿಡ್‌ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ತಮ್ಮ 8ನೇ ಬಜೆಟ್‌ ಮಂಡನೆ ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ ಸಾಂಕ್ರಾಮಿಕವನ್ನು ಎದುರಿಸಲು ರಾಜ್ಯದಾದ್ಯಂತ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗಿತ್ತು. ಕೋವಿಡ್ ಎದುರಿಸುವಿಕೆ ಮತ್ತು ಈ ವಿಚಾರದಲ್ಲಿ ಭಾರತದ ಪಾತ್ರಕ್ಕೆ ಜಾಗತಿಕ ಮನ್ನಣೆ ದೊರೆಯುವಲ್ಲಿ ಕರ್ನಾಟಕದ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು.

Live Updates| Karnataka Budget 2021: ಬಜೆಟ್ ಮಂಡನೆ ಆರಂಭಿಸಿದ ಯಡಿಯೂರಪ್ಪ, ಕಾಂಗ್ರೆಸ್ ಪ್ರತಿಭಟನೆ

ಕೊರೊನಾ ನಿಯಂತ್ರಣ, ಲಸಿಕೆ ಹಂಚಿಕೆಯಲ್ಲಿ ರಾಜ್ಯದ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಗ್ಗೆ ಪ್ರಧಾನಿಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು