ಬೆಂಗಳೂರು: ಕೋವಿಡ್ ಸಂಕಷ್ಟ ಹಾಗೂ ಆರ್ಥಿಕ ಹಿಂಜರಿಯತ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 2021-22ನೇ ಹಣಕಾಸು ವರ್ಷದ ಬಜೆಟ್ ಮಂಡಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು 7,795 ಕೋಟಿ ರೂಪಾಯಿಗಳ ಅನುದಾನ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ಗೆ ಸಂಬಂಧಿಸಿದ ಸಮಗ್ರ ಮಾಹಿತಿ ಇಲ್ಲಿ ಕಲೆ ಹಾಕಿರಿ

ಬೆಂಗಳೂರಿನ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಘೋಷಿಸಲಾಗಿರುವ ಪ್ರಮುಖ ಯೋಜನೆಗಳ ಪಟ್ಟಿ ಇಲ್ಲಿದೆ:

*ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ ಎಕ್ಸ್‌ಪೀರಿಯನ್ಸ್ ಬೆಂಗಳೂರು ಕೇಂದ್ರ ಅಭಿವೃದ್ಧಿ
*ಬೈಯಪ್ಪನಹಳ್ಳಿಯಲ್ಲಿರುವ ಎನ್.ಜಿ.ಇ.ಎಫ್.ನಲ್ಲಿ ಹಾಗೂ ಇನ್ನೂ ಮೂರು ಕಡೆಗಳಲ್ಲಿ ವೃಕ್ಷೋದ್ಯಾನಗಳ ಅಭಿವೃದ್ಧಿ.
*ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ.
*14,788 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 58.2 ಕೀ.ಮೀ. ಉದ್ದದ ಹೊರ ವರ್ತುಲ ರಸ್ತೆ-ಏರ್ ಪೋರ್ಟ್ ಮೆಟ್ರೋ ಜಾಲ ಹಂತ 2ಎ ಮತ್ತು 2ಬಿ ಅನುಷ್ಠಾನ.
*ಉಪ ನಗರ ರೈಲು ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ.
*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಕಟ್ಟಡ ನಿರ್ಮಾ ಶೀಘ್ರ ಪೂರ್ಣ, ಗರಿಷ್ಠ ವಾರ್ಷಿಕ ಪ್ರಯಾಣಿಕರ ಸಾಮರ್ಥ್ಯ 60 ದಶಲಕ್ಷಕ್ಕೆ ಹೆಚ್ಚಳ.
*ಕೋರಮಂಗಲ ಕಣಿವೆಯನ್ನು ಪ್ರವಾಸಿ ಆಕರ್ಷಣೆಯಾಗಿ ಅಭಿವೃದ್ಧಿಪಡಿಸುವ 169 ಕೋಟಿ ರೂ. ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆ ಅನುಷ್ಠಾನ.
*ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರ ರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.
*ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ವತಿಯಿಂದ ಬಿಬಿಎಂಪಿ ಸಹಯೋಗದೊಂದಿಗೆ 450 ಕೋಟಿ ವೆಚ್ಚದಲ್ಲಿ ಕೆ.ಸಿ. ವ್ಯಾಲಿ ಆವರಣದ 248 ಎಂ.ಎಲ್.ಡಿ ಸಾಮರ್ಥ್ಯದ ಎಸ್.ಟಿ.ಪಿ ಪುನರುಜ್ಜೀವನ ಮತ್ತು ಉನ್ನತೀಕರಣಕ್ಕೆ ಕ್ರಮ.
*ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ಸುಗಳಲ್ಲಿ ಈ ಕಾರ್ಡ್ ಬಳಕೆಗೆ ಅವಕಾಶ.
*ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಆಟೋಮ್ಯಾಟಿಕ್ ಫೇರ್ ಕಲೆಕ್ಷನ್ ಸಿಸ್ಟಂ ಯೋಜನೆ ಅನುಷ್ಠಾನ.
*ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ ಸ್ಥಾಪನೆ.
*ಉತ್ತರ ಬೆಂಗಳೂರಿನಲ್ಲಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ.
*28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಹಾಗೂ ಆರ್ಗನ್ ಟ್ರಾನ್ಸ್‌ಪ್ಲಾಂಟ್ ಸಂಸ್ಥೆ ಪ್ರಸಕ್ತ ಸಾಲಿನಲ್ಲಿ ಕಾರ್ಯಾರಂಭ.
*ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ 50 ಹಾಸಿಗೆ ಸಾಮರ್ಥ್ಯದ ಉಪಕೇಂದ್ರ
*ಬಿಬಿಎಂಪಿಯ 57 ವಾರ್ಡ್‌ಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ.
*33 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ.
*ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು 2 ಕೋಟಿ ರೂ. ಮೀಸಲು.

ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು 7,795 ಕೋಟಿ ರೂ. ಅನುದಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.