ಶುಕ್ರವಾರ, ಏಪ್ರಿಲ್ 23, 2021
28 °C

Karnataka Budget 2021 | ಯಡಿಯೂರಪ್ಪ ಬಜೆಟ್‌ನಲ್ಲಿ ಏನೇನಿವೆ ಕೊಡುಗೆ: ಮುಖ್ಯಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Bs yediyurappa Prajavani Photo

ಕೋವಿಡ್‌ ಮತ್ತು ಆರ್ಥಿಕ ಹಿಂಜರಿತದ ಸಂಕಷ್ಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ 8ನೇ ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ಏನಿದೆ, ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಲಾಗಿದೆ, ಹೊಸ ಯೋಜನೆಗಳೇನಿವೆ? ಇಲ್ಲಿವೆ ಮುಖ್ಯಾಂಶಗಳು...

* ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ

* 45 ಲಕ್ಷ ರೂ. ವರೆಗೆ ಫ್ಲ್ಯಾಟ್‌ ಖರೀದಿ ಮಾಡುವಾಗ ಮುದ್ರಾಂಕ ಶುಲ್ಕ ಪಾವತಿಯಿಲ್ಲ

* ಅಲ್ಪಸಂಖ್ಯಾತರ ಅಭಿವೃದ್ಧಿಗೆ ₹1500 ಕೋಟಿ ಮೀಸಲು

* ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ₹500 ಕೋಟಿ ಅನುದಾನ

* ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು

ಬಜೆಟ್ ಲೈವ್: Live Updates| Karnataka Budget 2021: ಹೊಸ ತೆರಿಗೆ ಹೊರೆ ಇಲ್ಲ, ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತವೂ ಇಲ್ಲ

* 2021-22ನೇ ಸಾಲಿನ ಬಜೆಟ್ ಗಾತ್ರ ₹ 2.5 ಲಕ್ಷ ಕೋಟಿ

* ರಾಜ್ಯದ ಜಿಎಸ್‌ಟಿ ಸಂಗ್ರಹದಲ್ಲಿ ಇಳಿಕೆ: ಯಡಿಯೂರಪ್ಪ

* ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಿ ನಿವಾಸ: ಬಿಎಸ್‌ವೈ ಘೋಷಣೆ

ಓದಿ: 

* ಕಿದ್ವಾಯಿ ಮಾದರಿಯ ಆಸ್ಪತ್ರೆಗೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

* ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ

* ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ

* ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್

* ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು ₹1 ಕೋಟಿ ಅನುದಾನ

* ಪ್ರಧಾನ ಮಂತ್ರಿ ಮತ್ಸ್ಯ ಸಂಪ್ರದಾ ಯೋಜನೆಗೆ ₹62 ಕೋಟಿ

* ಮಹಿಳಾ ದಿನಕ್ಕೆ ಮಹಿಳೆಯರಿಗೆ ಹೆಚ್ಚಿನ ಸೌಕರ್ಯ:  6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

* ಉಪನಗರ ರೈಲು ಯೋಜನೆಗೆ 2021-22ನೇ ಸಾಲಿಗೆ 850 ಕೋಟಿ

* ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ₹900 ಕೋಟಿ

ಓದಿ: 

* ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ

* ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತರ ರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್

* ಬೆಂಗಳೂರು ನಗರದ ಘನತ್ಯಾಜ್ಯ ಸಂಗ್ರಹಣೆ, ಸಾಗಣಿಕೆ ಮತ್ತು ಸಂಸ್ಕರಣೆಯನ್ನು ನಿರ್ವಹಿಸಲು ಪ್ರತ್ಯೇಕ ಕಂಪನಿ

* ಬೆಂಗಳೂರು ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಪ್ರತಿ ವಾರಾಂತ್ಯದ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ₹2 ಕೋಟಿ

* ಕನ್ನಡ ಭಾಷೆಯನ್ನು ತಂತ್ರಜ್ಞಾನಕ್ಕೆ ಇನ್ನಷ್ಟು ಒಗ್ಗಿಸುವ ನಿಟ್ಟಿನಲ್ಲಿ ₹2 ಕೋಟಿ ಅನುದಾನ

ಓದಿ: Karnataka Budget 2021: ಬರಲಿದೆ ಇ– ಕನ್ನಡ ಕಲಿಕಾ ಅಕಾಡೆಮಿ, ಏನಿದು?

* ಸಾವಯವ ಕೃಷಿ ಉತ್ತೇಜನಕ್ಕೆ ₹500 ಕೋಟಿ ವೆಚ್ಚದಲ್ಲಿ ಯೋಜನೆ

* ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಇರುವ ಮೀಸಲಾತಿ ಶೇ 50ಕ್ಕೆ ಹೆಚ್ಚಳ

* ಕೃಷಿ ಭೂಮಿಯಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನಕ್ಕೆ 2021-22ನೇ ಸಾಲಿನಲ್ಲಿ ₹10 ಕೋಟಿ ಅನುದಾನ

* ಬೈಯಪ್ಪನಹಳ್ಳಿಯಲ್ಲಿ ₹50 ಕೋಟಿ ವೆಚ್ಚದ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ.

ಓದಿ: Karnataka Budget 2021: ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ₹7,795 ಕೋಟಿ ಅನುದಾನ

* ಆಯ್ದ 50 ಶಾಲೆಗಳ ಅಭಿವೃದ್ಧಿಗೆ ₹100 ಕೋಟಿ

* ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ₹150 ಕೋಟಿ ಅನುದಾನ

* ಸರ್ಕಾರಿ ಶಾಲೆಗಳಿಗೆ ಪೀಠೋಪಕರಣಗಳು ಮತ್ತು ಕಲಿಕಾ ಸಾಮಗ್ರಿಗಳ ವಿತರಣೆಗೆ ₹ 50 ಕೋಟಿ ಅನುದಾನ

* ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ನವೀಕರಣ ಮತ್ತು ದುರಸ್ತಿಗೆ ₹33 ಕೋಟಿ ಅನುದಾನ

* ಬೆಂಗಳೂರು ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹7,795 ಕೋಟಿ ಅನುದಾನ

* ಆಗಸ್ಟ್ 2021ರೊಳಗೆ ಒಂದು ರಾಷ್ಟ್ರ ಒಂದು ಕಾರ್ಡ್ ವ್ಯವಸ್ಥೆ ಜಾರಿಗೆ

ಓದಿ: 

* ಬಿಬಿಎಂಪಿಯ 57 ವಾರ್ಡ್‌ಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಜನಾರೋಗ್ಯ ಕೇಂದ್ರಗಳ ಸ್ಥಾಪನೆ

* ₹33 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲೆಗಳ ನವೀಕರಣ ಮತ್ತು ಪುನರ್ ನಿರ್ಮಾಣ.

* ಉತ್ತರ ಬೆಂಗಳೂರಿಗೆ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

* ರಾಜ್ಯದ ಡೇಟಾ ಕೇಂದ್ರದ ಸೈಬರ್‌ ಸುರಕ್ಷತೆ ಬಲಪಡಿಸಲು ಸುಸಜ್ಜಿತ ಭದ್ರತಾ ಕಾರ್ಯಾಚರಣೆ ಕೇಂದ್ರದ ಸ್ಥಾಪನೆಗೆ ₹ 2 ಕೋಟಿ

* ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಹಕ್ಕು ದಾಖಲೆ ವಿತರಿಸುವ ‘ಸ್ವಾಮಿತ್ವ’ ಯೋಜನೆ ತ್ವರಿತ ಜಾರಿಗೆ ₹ 25 ಕೋಟಿ

* ‘ಜಿಲ್ಲಾಧಿಕಾರಿ ನಡಿಗೆ ಹಳ್ಳಿಯ ಕಡೆಗೆ’, ‘ಮನೆ ಬಾಗಿಲಿಗೇ ಮಾಸಾಶನ’ ಕಾರ್ಯಕ್ರಮಗಳ ಮುಂದುವರಿಕೆ

ನೋಡಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು