ಶುಕ್ರವಾರ, ಏಪ್ರಿಲ್ 16, 2021
31 °C

Karnataka Budget 2021| ಮಹಿಳಾ ದಿನಕ್ಕೆ ಮಹಿಳೆಯರಿಗೆ ಬಜೆಟ್‌ನಲ್ಲಿ ಹಲವು ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶ್ವ ಮಹಿಳಾ ದಿನದಂದೇ ಮಂಡಲಾಗಿರುವ ಕರ್ನಾಟಕ ಬಜೆಟ್‌ನಲ್ಲಿ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ.

- ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ಇತರ ಮಹಾನಗರಗಳಲ್ಲಿರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರಗಳಾಗಿ ಉನ್ನತೀಕರಣ; ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶು ಪಾಲನಾ ಕೇಂದ್ರ ತೆರಯಲು ಕ್ರಮ.

- ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ. 4ರ ರಿಯಾಯಿತಿ ಬಡ್ಡಿದರದಲ್ಲಿ ಮಹಿಳಾ ಅಭಿವೃದ್ಧಿ ನಿಗಮ/ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ₹2 ಕೋಟಿ ರೂ. ವರೆಗೆ ಸಾಲ ಸೌಲಭ್ಯ.

- “ಸಂಜೀವಿನಿ” ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಆರು ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಪಂಚಾಯತ್ ರಾಜ್ ಸಂಸ್ಥೆಗಳ ಮೂಲಕ ಬೆಂಗಲ; ₹60 ಸಾವಿರ ಮಹಿಳೆಯರಿಗೆ ಇದರಿಂದ ಅನುಕೂಲ.

- ಮಹಿಳೆಯರ ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು. 2260 ಕಿರು ಉದ್ದಿಮೆಗಳ ಮೂಲಕ 25 ಸಾವಿರ ಮಹಿಳೆಯರಿಗೆ ಉತ್ತೇಜನ.

- ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು, ವಿಭಾಗ ಮಟ್ಟದಲ್ಲಿ ವಾರ್ಷಿಕ ಮೇಳ ಆಯೋಜನೆ ಹಾಗೂ ಇ-ಮಾರುಕಟ್ಟೆ ಸೌಲಭ್ಯ ಜಾರಿ.

- ಬೆಂಗಳೂರಿನಲ್ಲಿ ಗಾರ್ಮೆಂಟ್ ಉದ್ಯಮದ ಮಹಿಳಾ ಕಾರ್ಮಿಕರಿಗೆ ₹30 ಕೋಟಿ ರೂ. ವೆಚ್ಚದಲ್ಲಿ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ನೀಡುವ ‘ವನಿತಾ ಸಂಗಾತಿ’ ಯೋಜನೆಗೆ ಚಾಲನೆ.

- ಮಹಿಳೆಯರು ಉದ್ಯೋಗ ಕೈಗೊಳ್ಳಲು ಪೂರಕ ವಾತಾವರಣ ನಿರ್ಮಾಣಕ್ಕಾಗಿ ವಿವಿಧ ನಿಯಮಾವಳಿಗಳ ಮರು ಪರಿಶೀಲನೆ.

- ಮಹಿಳಾ ಆಯವ್ಯಯ ಮತ್ತು ಮಕ್ಕಳ ಆಯವ್ಯಯವನ್ನು ಪಂಚಾಯತ್‌ ರಾಜ್ ವ್ಯವಸ್ಥೆಯಲ್ಲಿ ಅಳವಡಿಸಲು ಕ್ರಮ.

- ಸೇಫ್ ಸಿಟಿ ಯೋಜನೆಯಡಿ ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ 7500 ಕ್ಯಾಮರಾ ಅಳವಡಿಕೆ. ತಂತ್ರಜ್ಞಾನ ಆಧಾರಿತ ಇ-ಬೀಟ್ ಮೂಲಕ ರಾತ್ರಿ ಗಸ್ತನ್ನು ತೀವ್ರಗೊಳಿಸಲು ಕ್ರಮ.

- ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸೂಕ್ತ ನೆರವು ಹಾಗೂ ಮಾರ್ಗದರ್ಶನ ನೀಡಲು ನಿಮ್ಹಾನ್ಸ್ ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ.

- ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಲೈಸನ್ಸ್‌ ಪಡೆದ ಮಹಿಳೆಯರಿಗೆ ಪ್ರಾಂಗಣದಲ್ಲಿನ ನಿವೇಶನ, ಗೋದಾಮು, ಅಂಗಡಿ, ಅಂಗಡಿ-ವ-ಗೋದಾಮುಗಳ ಹಂಚಿಕೆಯಲ್ಲಿ ಶೇ. 10ರಷ್ಟು ಮೀಸಲಾತಿ. ಗೋದಾಮುಗಳ ಹಂಚಿಕೆಯಲ್ಲಿ ಶೇ. 10ರಷ್ಟು ಮೀಸಲಾತಿ.
- ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆ ಸೌಲಭ್ಯ.

- ಮಹಿಳಾ ವಾಣಿಜ್ಯೋದ್ಯಮಿಗಳನ್ನು ಬೆಂಬಲಿಸಲು, ಐದು ಕೋಟಿ ರೂ. ವೆಚ್ಚದಲ್ಲಿ Elevate Women Entrepreneurship ಕಾರ್ಯಕ್ರಮ ಜಾರಿ.

ಇತರೆ

- ರಾಜ್ಯದ ಸ್ವ-ಸಹಾಯ ಗುಂಪುಗಳು ಮತ್ತು ಅವುಗಳ ಒಕ್ಕೂಟವನ್ನು ಬಲಪಡಿಸಲು ಸ್ವಸಹಾಯ ಗುಂಪುಗಳ ನೀತಿ ಜಾರಿ; ಎಲ್ಲಾ ಸ್ವ ಸಹಾಯ ಗುಂಪುಗಳನ್ನು ಜೀವನೋಪಾಯ ಅಭಿಯಾನದ ವ್ಯಾಪ್ತಿಗೆ ತರಲು ಕ್ರಮ.

- ಮುಖ್ಯಮಂತ್ರಿಗಳ ನೇರ ಮೇಲ್ವಿಚಾರಣೆಯಲ್ಲಿ “ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಅಭಿಯಾನ”ಕ್ಕೆ ಚಾಲನೆ.

- ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ಅನುದಾನ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು