ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ₹1,000 ಕೋಟಿ ಅನುದಾನ ಸ್ವಾಗತಾರ್ಹ: ಡಿಕೆಶಿ

Last Updated 4 ಮಾರ್ಚ್ 2022, 11:07 IST
ಅಕ್ಷರ ಗಾತ್ರ

ಬೆಂಗಳೂರು: ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ₹1,000 ಕೋಟಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಆದರೆ ಇದನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ ಚೊಚ್ಚಲ ಬಜೆಟ್‌ನಲ್ಲಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುದಾನ ಹಂಚಿದ್ದಾರೆ. ಮೇಕೆದಾಟು ಯೋಜನೆಗೆ ₹1,000 ಕೋಟಿ ಅನುದಾನ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, 'ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿರುವುದು ಸ್ವಾಗತಾರ್ಹ. ನೀರಿನ ವಿಷಯದಲ್ಲಿ ಕರ್ನಾಟಕವನ್ನು ಸ್ವಾವಲಂಬಿಯಾಗಿಸುವ ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ' ಎಂದು ಹೇಳಿದ್ದಾರೆ.

'ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಡೆಸಲಾದ ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕನ್ನಡಿಗರಿಗೂ ಇದರ ಪ್ರತಿಫಲ ಸಲ್ಲುತ್ತದೆ. ಇದು ನಮ್ಮೆಲ್ಲರ ಗೆಲುವು. ಸಾಮೂಹಿಕ ಹೋರಾಟದಿಂದ ಹಕ್ಕುಗಳನ್ನು ಪಡೆಯಬಹುದು ಎಂಬುದಕ್ಕೆ ಇದೊಂದು ನಿದರ್ಶನ. ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು' ಎಂದು ಹೇಳಿದ್ದಾರೆ.

'ಆದರೆ, ಕಳೆದ ಸಾಲಿನ ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಘೋಷಿಸಿದ್ದ ₹ 7,795 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಸರ್ಕಾರ ಒಂದು ವರ್ಷ ಕಳೆದರೂ ಈಡೇರಿಸಿಲ್ಲ ಎಂಬುದು ಗಮನಾರ್ಹ. ಹಾಗಾಗಿ ಮಹತ್ವಾಕಾಂಕ್ಷೆಯ ಯೋಜನೆಗೆ ಸಾವಿರ ಕೋಟಿ ರೂಪಾಯಿ ಘೋಷಣೆ ಕೇವಲ ಭರವಸೆಯಾಗಿ ಉಳಿಯದೆ ತ್ವರಿತವಾಗಿ ಕಾರ್ಯಗತಗೊಳ್ಳಬೇಕು' ಎಂದು ಹೇಳಿದ್ದಾರೆ.

ಇವನ್ನೂ ಓದಿ:

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT