ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2022: ಅಲ್ಪಸಂಖ್ಯಾತರಿಗಾಗಿ ಅಬ್ದುಲ್ ಕಲಾಂ ವಸತಿ ಶಾಲೆ

Last Updated 4 ಮಾರ್ಚ್ 2022, 9:32 IST
ಅಕ್ಷರ ಗಾತ್ರ

ಬೆಂಗಳೂರು: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಬಹುವಿಧ ವಸತಿ ಶಾಲೆಗಳಿಗೆ ‘ಎ.ಪಿ.ಜೆ.ಅಬ್ದುಲ್ ಕಲಾಂ’ ಹೆಸರು ನೀಡಿ ಸಿಬಿಎಸ್‌ಇ ಮಾನ್ಯತೆ ಪಡೆಯಲು ಪ್ರಯತ್ನಿಸಲಾಗುವುದು ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುವಿಧ ವಸತಿ ಶಾಲೆಗಳನ್ನು ಒಂದುಗೂಡಿಸಲಾಗುವುದು. ಪ್ರತಿ ಜಿಲ್ಲೆಯ ಕನಿಷ್ಠ ಒಂದು ಶಾಲೆಯಲ್ಲಿ ಪದವಿಪೂರ್ವ ತರಗತಿಗಳನ್ನು ಆರಂಭಿಸಲಾಗುವುದು. ಜತೆಗೆ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು. ಈ ಉದ್ದೇಶಕ್ಕಾಗಿ ₹25 ಕೋಟಿ ಹಂಚಿಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ 100 ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿಸಲು ₹10 ಕೊಟಿ ಅನುದಾನ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಬಜೆಟ್‌ ಲೈವ್ ಅಪ್‌ಡೇಟ್‌ಗೆ ಕ್ಲಿಕ್ ಮಾಡಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT