ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರಿನಲ್ಲಿ ₹186 ಕೋಟಿ ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ

Last Updated 4 ಮಾರ್ಚ್ 2022, 13:01 IST
ಅಕ್ಷರ ಗಾತ್ರ

ಬೆಂಗಳೂರು: ರಾಯಚೂರಿನಲ್ಲಿ ₹186 ಕೋಟಿ ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ರಾಯಚೂರಿನಲ್ಲಿ ಗ್ರೀನ್-ಫೀಲ್ಡ್ ವಿಮಾನ ನಿಲ್ದಾಣವನ್ನು ಜಿಲ್ಲಾ ಖನಿಜ ನಿಧಿ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ₹186 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಒಡಂಬಡಿಕೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇತರೆ ಪ್ರಮುಖ ಘೋಷಣೆಗಳು:
*ದಾವಣೆಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ ತಯಾರಿ.
*ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ.
*ರಾಜ್ಯದಲ್ಲಿ ವಾಯುಮಾರ್ಗ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು ಮಡಿಕೇರಿ, ಚಿಕ್ಕಮಗಳೂರು ಮತ್ತು ಹಂಪಿಯಲ್ಲಿ ಪಿ.ಪಿ.ಪಿ ಮಾದರಿಯಡಿ ಹೆಲಿಪೋರ್ಟ್‌ಗಳನ್ನು ₹30 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಇವನ್ನೂ ಓದಿ:

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT