ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಒತ್ತು ನೀಡುವ ಬಜೆಟ್‌: ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ

Last Updated 4 ಮಾರ್ಚ್ 2022, 14:21 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ವಿದ್ಯಾರ್ಥಿಗಳನ್ನು ಕೌಶಲ್ಯಯುಕ್ತರನ್ನಾಗಿಸುವ ಮೂಲಕ ಜಾಗತಿಕ ಪೈಪೋಟಿಗೆ ಸಿದ್ಧಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರಾಜ್ಯ ಬಜೆಟ್‌ ಕುರಿತು ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಶೈಕ್ಷಣಿಕ ಬದಲಾವಣೆ ಮೂಲಕ ಸಮಾಜವನ್ನು ಬದಲಿಸಬಹುದು ಎನ್ನುವ ಧ್ಯೇಯದೊಂದಿಗೆ ಈ ಸಾಲಿನ ಬಜೆಟ್‌ನಲ್ಲಿ ಶೈಕ್ಷಣಿಕ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

‘ನಮ್ಮ ವಿದ್ಯಾರ್ಥಿಗಳನ್ನು ಜ್ಞಾನ ಮತ್ತು ಕೌಶಲ್ಯಯುಕ್ತರನ್ನಾಗಿಸುವ ಮೂಲಕ ಜಾಗತಿಕ ಪೈಪೋಟಿಗೆ ಸಿದ್ಧಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದು ಅಶ್ವತ್ಥನಾರಾಯಣ ಟ್ವೀಟಿಸಿದ್ದಾರೆ.

‘ರಾಜ್ಯದ ಸಮಗ್ರ ಅಭಿವೃದ್ಧಿಯ ಜತೆ ಶಿಕ್ಷಣ, ಉದ್ಯೋಗ, ಕೃಷಿ, ಆರೋಗ್ಯ ಹಾಗೂ ಮೂಲ ಸೌಕರ್ಯಗಳಿಗೆ ಒತ್ತು ನೀಡುವ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ತಲುಪುವ ದೂರದೃಷ್ಟಿಯುಳ್ಳ ಸರ್ವವ್ಯಾಪಿ, ಸರ್ವಸ್ಪರ್ಶಿ, ಅಭಿವೃದ್ಧಿಗೆ ಒತ್ತು ನೀಡುವ ಬಜೆಟ್‌ ಇದಾಗಿದೆ’ ಎಂದು ಅವರು ಹೇಳಿದ್ದಾರೆ.

‘ನಮ್ಮ ರಾಜ್ಯದ ಪ್ರತಿ ಮಹಿಳೆಯರು ಆರ್ಥಿಕ ಸಬಲೀಕರಣ ಸಾಧಿಸುವಂತೆ ಮಾಡಲು ನಮ್ಮ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಸ್ವ ಉದ್ಯೋಗ ಹಾಗೂ ಸ್ವಾವಲಂಬಿ ಜೀವನ ನಡೆಸಲು ಅಗತ್ಯ ನೆರವು ನೀಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲಿ ನಮ್ಮ ಸಹೋದರಿಯರು ಮಹತ್ತರ ಪಾತ್ರ ವಹಿಸುವಂತಾಗಬೇಕೆಂಬುದು ನಮ್ಮ ಉದ್ದೇಶವಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ತಿಳಿಸಿದ್ದಾರೆ.

ಇವನ್ನೂ ಓದಿ

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT