ಗುರುವಾರ , ಆಗಸ್ಟ್ 18, 2022
25 °C

ಬೊಮ್ಮಾಯಿ ಬಜೆಟ್‌: ರೇಷ್ಮೆ, ಪಶುಸಂಗೋಪನೆ ಕ್ಷೇತ್ರಗಳಿಗೇನು ಕೊಡುಗೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯಲ್ಲಿ 2022-23ನೇ ಸಾಲಿನ ಬಜೆಟ್‌ ಮಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ರೇಷ್ಮೆ ಉತ್ಪಾದನೆಯಲ್ಲಿ ನಮ್ಮ ರಾಜ್ಯವು ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ರೇಷ್ಮೆ ಬೆಳೆಗಾರರು ಉತ್ಪಾದಿಸಿದ ದ್ವಿತಳಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್‌ಗೆ 10 ಸಾವಿರ ರೂ.ಗಳಂತೆ ಪ್ರೋತ್ಸಾಹ ಧನ ಘೋಷಿಸಿದ್ದಾರೆ.

ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ.ಗಳ ವೆಚ್ಚದಲ್ಲಿ ಶೈತ್ಯಾಗಾರ ನಿರ್ಮಾಣ ಮಾಡಲಾಗುವುದು. ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್‌ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು.

ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಅತ್ಯಾಧುನಿಕ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಲು ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ ನಬಾರ್ಡ್ ನೆರವಿನೊಂದಿಗೆ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.

ರೇಷ್ಮೆ ಬೆಳೆಗಾರರ ಆದಾಯವನ್ನು ಹೆಚ್ಚಿಸಲು ಮತ್ತು ರೇಷ್ಮೆ ಉತ್ಪಾದನೆಯನ್ನು ವೃದ್ಧಿಸಲು ದ್ವಿತಳಿ ಬಿತ್ತನೆ ಗೂಡಿಗೆ ನೀಡುತ್ತಿರುವ  ಪ್ರೋತ್ಸಾಹಧನವನ್ನು ಪ್ರತಿ ಕೆಜಿಗೆ 50 ರೂ.ಗಳಷ್ಟು ಹೆಚ್ಚಿಸಲಾಗುವುದು ಹಾಗೂ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೂ ಪ್ರೋತ್ಸಾಹಧನ ನೀಡಲಾಗುವುದು.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ರೇಷ್ಮೆಯ ಎಲ್ಲಾ ''ಉತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ಸುಸಜ್ಜಿತ ತರಬೇತಿ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ರೇಷ್ಮೆ ಬೆಳೆಗಾರರಿಗೆ ಪಾರದರ್ಶಕ ಮತ್ತು ನ್ಯಾಯಯುತ ಬೆಲೆ ಒದಗಿಸಲು ಎಲ್ಲಾ ರೇಷ್ಮೆ ಗೂಡು ಮಾರುಕಟ್ಟೆಗಳಲ್ಲಿ e-Weighment ಹಾಗೂ e-Payment ಅನುಷ್ಠಾನಗೊಳಿಸಲಾಗುವುದು.

ರೇಷ್ಮೆಗೂಡು ಮತ್ತು ಕಚ್ಛಾ ರೇಷ್ಮೆ ಧಾರಣೆಗಳಲ್ಲಿ ಕುಸಿತವಾದಾಗ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಣಿಕೆದಾರರ ಹಿತರಕ್ಷಣೆಗಾಗಿ, ಅವರು ಉತ್ಪಾದಿಸಿದ ಕಚ್ಛಾ ರೇಷ್ಮೆಯನ್ನು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ವತಿಯಿಂದ ಖರೀದಿಸಲು ಕ್ರಮವಹಿಸಲಾಗುವುದು.

ಪಶು ಸಂಗೋಪಣೆ ಕ್ಷೇತ್ರ:
ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳ ಆರೋಗ್ಯ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕಿತ್ಸಾಲಯಗಳನ್ನು ಬಲಪಡಿಸುವುದರೊಂದಿಗೆ ನೂತನ 100 ಪಶುಚಿಕಿತ್ಸಾಲಯಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಖಾಲಿಯಿರುವ 400 ಪಶು ವೈದ್ಯಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಕ್ರಮವಹಿಸಲಾಗಿದೆ.

ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರವು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ಸೌಲಭ್ಯ - ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್" ಸ್ಥಾಪಿಸಲು ಉದ್ದೇಶಿಸಲಾಗಿದೆ. ಸದರಿ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರ ಕರ್ನಾಟಕ ಹಾಲು ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರೂ. ಮತ್ತು ಸರ್ಕಾರವು 100 ರೂ.ಗಳ ಷೇರು ಬಂಡವಾಳವನ್ನು ಒದಗಿಸಲಿದೆ.

ಹಾವೇರಿ ಜಿಲ್ಲೆಯಲ್ಲಿ ಒಂದು ಲೀಟರ್‌ ಸಾಮರ್ಥ್ಯದ ಡೈರಿಯನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದ್ದು, ಕರ್ನಾಟಕ ಹಾಲು ಒಕ್ಕೂಟದ ಸಹಯೋಗದೊಂದಿಗೆ ಶಿವಮೊಗ್ಗ, ದಾವಣಗೆರೆ-ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಜಿಲ್ಲಾ ಹಾಲು ಒಕ್ಕೂಟಗಳನ್ನು ರಚಿಸಲು ಉದ್ದೇಶಿಸಿದೆ.

ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಗೋ ಹತ್ಯಾ ನಿಷೇಧ ಅಧಿನಿಯಮ, 2020ನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರಸ್ತುತ ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31 ರಿಂದ 100ಕ್ಕೆ ಹೆಚ್ಚಿಸಲಾಗುವುದು. ಈ ಉದ್ದೇಶಕ್ಕೆ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಗೋಶಾಲೆಗಳಲ್ಲಿನ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ 11,000 ರೂ.ಗಳ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರವು ರಾಜ್ಯದಲ್ಲಿಯೇ ಮೊದಲ - ಯೋಜನೆ"ಯನ್ನು ಪ್ರಾರಂಭಿಸಲಿದೆ. ಬಾರಿಗೆ "ಪುಣ್ಯಕೋಟಿ ದತ್ತು ಯೋಜನೆ''ಯನ್ನು ಪ್ರಾರಂಭಿಸಲಾಗಿದೆ.

ರಾಜ್ಯದ ಸ್ಥಳೀಯ ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿಯನ್ನು ಹೆಚ್ಚಿಸಲು ಕೆ.ಎಂ.ಎಫ್. ಮೂಲಕ 2,000 ಗೋ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲಾಗುವುದು.

ರಾಜ್ಯದ ಗೋಶಾಲೆಗಳಲ್ಲಿನ ತ್ಯಾಜ್ಯಗಳನ್ನು ಪರಿಸರ ಸ್ನೇಹಿ ಉತ್ಪನ್ನಗಳಾಗಿಸಲು ಆರ್ಥಿಕ ನೆರವನ್ನು ನೀಡಲಾಗುವುದು. ಗೋ ಉತ್ಪನ್ನಗಳ ಮಾರಾಟಕ್ಕಾಗಿ 'ಗೋ ಮಾತಾ ಸಹಕಾರ ಸಂಘ'ವನ್ನು ಸ್ಥಾಪಿಸಲಾಗುವುದು. ಜೊತೆಗೆ ಗೋ ಉತ್ಪನ್ನಗಳ ತಾಂತ್ರಿಕತೆ ಮತ್ತು ಪ್ರಮಾಣೀಕರಣದ ಅಭಿವೃದ್ಧಿಗಾಗಿ ಪಶುವಿಶ್ವವಿದ್ಯಾಲಯದಲ್ಲಿ ಒಂದು ಸಂಶೋಧನಾ ಕೋಶವನ್ನು ಸ್ಥಾಪಿಸಲಾಗುವುದು.

ಕುರಿ / ಮೇಕೆ ಸಾಕಾಣಿಕೆದಾರರು / ವಲಸೆ ಕುರಿಗಾರರು ಆಕಸ್ಮಿಕ ಬಿ ಮರಣ ಹೊಂದಿದಲ್ಲಿ ಅವಲಂಬಿತ ಕುಟುಂಬವನ್ನು ಆರ್ಥಿಕ - ಸಂಕಷ್ಟದಿಂದ ಪಾರು ಮಾಡಲು ಕುರಿಗಾಹಿಗಳಿಗೆ ಐದು ಲಕ್ಷ ರೂ. ವಿಮಾ ಸೌಲಭ್ಯ ಒದಗಿಸಲಾಗುವುದು.

'ಅನುಗ್ರಹ ಕೊಡುಗೆ ಯೋಜನೆ'ಯಡಿ ಆಕಸ್ಮಿಕ ಮರಣ ಹೊಂದಿದ 3-6 ತಿಂಗಳ ವಯಸ್ಸಿನ ಕುರಿ/ಮೇಕೆಗಳಿಗೆ ನೀಡುವ ಪರಿಹಾರ ಧನವನ್ನು 2,500 ರೂ. ಗಳಿಂದ 3,500 ರೂ.ಗಳಿಗೆ ಹೆಚ್ಚಿಸಲಾಗುವುದು.

ಕುರಿ/ಮೇಕೆ ಸಾಕಾಣಿಕೆದಾರರು/ವಲಸೆ ಕುರಿಗಾರರು ಆಕಸ್ಮಿಕ ಮರಣ ಹೊಂದಿದಲ್ಲಿ ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕುರಿಗಾಹಿಗಳಿಗೆ 5 ಲಕ್ಷ ರೂ. ವಿಮಾ ಸೌಲಭ್ಯ ಒದಗಿಸಲಾಗುವುದು.

ಆರ್ಥಿಕವಾಗಿ ಹಿಂದುಳಿದ ಕುರಿಗಾರರಿಗೆ ವಸತಿ ಸೌಕರ್ಯದ ಜೊತೆಗೆ ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ರೂ. ಸಹಾಯಧನ ನೀಡಲಾಗುವುದು.

ಸರ್ಕಾರದ ಆರು ಕುಕ್ಕುಟ ಕೇಂದ್ರಗಳ ಮುಖಾಂತರ ಪ್ರಸಕ್ತ ಈ ಸಾಲಿನಲ್ಲಿ 5 ಲಕ್ಷ ಕೋಳಿಮರಿಗಳನ್ನು ಉತ್ಪಾದಿಸಲಾಗುವುದು. - 5 ಇವುಗಳನ್ನು ರೈತ ಮಹಿಳೆಯರಿಗೆ ವಿತರಿಸಿ ಅವರ ಆದಾಯ ಹೆಚ್ಚಿಸಲಾಗುವುದು.

ರಾಜ್ಯದಲ್ಲಿ ಹಂದಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಕಳೆದ ವರ್ಷ ಐದು ಹಂದಿ ತಳಿ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಿದ್ದು, ಪ್ರಸಕ್ತ ವರ್ಷದಲ್ಲಿ ಐದು ಹಂದಿ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು