ಸೋಮವಾರ, ಜುಲೈ 4, 2022
21 °C

ಅಸಮಾನತೆ ನಿವಾರಣೆಗೆ ಪೂರಕವಾದ ಬಜೆಟ್‌: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಈ ಬಾರಿಯ ಬಜೆಟ್‌ ರಾಜ್ಯದಲ್ಲಿನ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ನಿವಾರಣೆಗೆ ಪೂರಕವಾಗಿದೆ. ತಮ್ಮ ಸರ್ಕಾರ ದಿಟ್ಟ ಗುರಿಯೊಂದಿಗೆ ಎಲ್ಲರನ್ನೂ ಒಳಗೊಳ್ಳುವ ಬಜೆಟ್‌ ಮಂಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಬಜೆಟ್‌ ಮಂಡನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದು ಸಂಪೂರ್ಣವಾಗಿ ವಾಸ್ತವಿಕ ನೆಲೆಗಟ್ಟಿನಲ್ಲಿ ರೂಪಿಸಿದ ಬಜೆಟ್‌. ರಾಜ್ಯದ ನಿವ್ವಳ ಆಂತರಿಕ ಉತ್ಪನ್ನದ ಶೇ 3.5ರಷ್ಟು ಸಾಲ ಪಡೆಯುವ ಅವಕಾಶ ಇತ್ತು. ಆದರೆ, ವಿತ್ತೀಯ ಶಿಸ್ತು ಕಾಪಾಡುವ ಉದ್ದೇಶದಿಂದ ಶೇ 3.26ರಷ್ಟು ಸಾಲವನ್ನು ಮಾತ್ರ ಪಡೆಯುವ ತೀರ್ಮಾನ ಮಾಡಲಾಗಿದೆ. ರಾಜಸ್ವ ಕೊರತೆಯನ್ನೂ ಕಡಿಮೆ ಮಾಡಲಾಗಿದೆ’ ಎಂದರು.

ಇದೇ ಮೊದಲ ಬಾರಿಗೆ ನೈಸರ್ಗಿಕ ಅಸಮತೋಲನ ನಿವಾರಣೆಗೆ ಪೂರಕವಾಗಿ ‘ಪರಿಸರ ಬಜೆಟ್‌’ ರೂಪಿಸಲಾಗಿದೆ. ಇದು ತಮ್ಮ ಸರ್ಕಾರ ಹೊಂದಿರುವ ಸೂಕ್ಷ್ಮತೆಗೆ ಸಾಕ್ಷಿ. ಹೆಚ್ಚು ಜನರನ್ನು ತಲುಪುವಂತಹ ಆರೋಗ್ಯ ಸೇವೆಗಳಿಗೂ ಪ್ರಾಧಾನ್ಯ ನೀಡಲಾಗಿದೆ ಎಂದು ಹೇಳಿದರು.

‘ನೌಕರರ ವೇತನ ಪರಿಷ್ಕರಣೆ: ಈ ವರ್ಷದಲ್ಲೇ ಕ್ರಮ’
‘ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಈ ವರ್ಷದಲ್ಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಬೊಮ್ಮಾಯಿ ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ನಮ್ಮ ನಾಯಕರಾದ ಬಿ.ಎಸ್‌. ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳಿಗೆ ಈಗಾಗಲೇ ಭರವಸೆ ನೀಡಿದ್ದೇನೆ’ ಎಂದರು

‘ಕಾಂಗ್ರೆಸ್‌ನವರಿಗೆ ಕೇವಲ ರಾಜಕಾರಣ ಮಾಡುವುದು ಗೊತ್ತು. ಮೇಕೆದಾಟು ಯೋಜನೆಗೆ ಬಾಕಿ ಇರುವ ಅನುಮತಿಗಳು ಶೀಘ್ರದಲ್ಲೇ ದೊರಕುವ ವಿಶ್ವಾಸವಿದೆ. ಈ ಕಾರಣದಿಂದಾಗಿಯೇ ₹ 1,000 ಕೋಟಿ ಒದಗಿಸಲಾಗಿದೆ’ ಎಂದರು.

ಇವನ್ನೂ ಓದಿ

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು