ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಲಿಂಗಾಯತ, ಒಕ್ಕಲಿಗ ಅಭಿವೃದ್ಧಿ ನಿಗಮಗಳಿಗೆ ತಲಾ ₹100 ಕೋಟಿ ಯೋಜನೆ

Last Updated 4 ಮಾರ್ಚ್ 2022, 11:14 IST
ಅಕ್ಷರ ಗಾತ್ರ

ಬೆಂಗಳೂರು: ವೀರಶೈವ ಲಿಂಗಾಯತ, ಒಕ್ಕಲಿಗ ಅಭಿವೃದ್ಧಿ ನಿಗಮಗಳಿಗೆ ತಲಾ ₹100 ಕೋಟಿ ಯೋಜನೆ ರೂಪಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಶುಕ್ರವಾರ ರಾಜ್ಯ ಬಜೆಟ್‌ ಮಂಡಿಸಿದ ಅವರು, ‘ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಅಭಿವೃದ್ಧಿ ನಿಗಮಗಳ ಯೋಜನೆಗಳಿಗೆ ₹800 ಕೋಟಿ ನೀಡಲಾಗುವುದು’ ಎಂದು ತಿಳಿಸಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ ₹250 ಕೋಟಿ ವೆಚ್ಚದಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮರ್ಥ್ಯದ ಬಹುಮಹಡಿಯ ದೀನ್‍ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸಮುಚ್ಛಯ ನಿರ್ಮಾಣ ಮಾಡಲಾಗುವುದು’ ಎಂದು ಬೊಮ್ಮಾಯಿ ಹೇಳಿದರು.

’ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ ಮಾಡಲಾಗುವುದು’ ಎಂದು ಸಿಎಂ ಹೇಳಿದರು.

‘ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಶೇ.25ರಷ್ಟು ಮಹಿಳೆಯರಿಗೆ ಮೀಸಲು ಒದಗಿಸಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.

‘ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಕೊರೆಯಲು ಡಿ.ಬಿ.ಟಿ. ಮೂಲಕ ಹಣ ವರ್ಗಾವಣೆ, ವಿದ್ಯುದೀಕರಣ ಶುಲ್ಕ ಸರ್ಕಾರದಿಂದ ಪಾವತಿಸಲಾಗುವುದು. 2022-23ರಲ್ಲಿ ಒಟ್ಟಾರೆ ₹1,115 ಕೋಟಿ ವೆಚ್ಚದಲ್ಲಿ ಅನುಷ್ಠಾನ ಮಾಡಲಾಗುವುದು’ ಎಂದು ಹೇಳಿದರು.

‘ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ ₹400 ಕೋಟಿ ಯೋಜನೆ ರೂಪಿಸಲಾಗುವುದು’ ಎಂದು ಸಿಎಂ ತಿಳಿಸಿದರು.

‘ಮರಾಠಾ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ ₹50 ಕೋಟಿ ನೀಡಲಾಗುವುದು’ ಎಂದು ಬೊಮ್ಮಾಯಿ ಹೇಳಿದರು.

‘ಕ್ರಿಶ್ಚಿಯನ್, ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಅಭಿವೃದ್ಧಿಗೆ ₹50 ಕೋಟಿ ಯೋಜನೆ ಹಮ್ಮಿಕೊಳ್ಳಲಾಗುವುದು’ ಎಂದು ಸಿಎಂ ತಿಳಿಸಿದರು.

ಇವನ್ನೂ ಓದಿ...

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT