ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ

Last Updated 4 ಮಾರ್ಚ್ 2022, 7:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ಹೀಗಿವೆ;

* ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹20 ಕೋಟಿ ಅನುದಾನ

* ತಳ ಸಮುದಾಯದಲ್ಲಿರುವ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಪ್ರತಿ ವಿಭಾಗ ಮಟ್ಟದಲ್ಲಿ 4 ಸಾಂಸ್ಕೃತಿಕ ಶಿಬಿರ ಆಯೋಜನೆ

* ಕನ್ನಡದ ಹೆಸರಾಂತ ಸಾಹಿತಿಗಳಾದ ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಡಾ.ಚಂದ್ರಶೇಖರ ಪಾಟೀಲ, ಚೆನ್ನವೀರ ಕಣವಿ ಮೊದಲಾದವರ ಅಮೂಲ್ಯ ಸಾಹಿತ್ಯ ಪ್ರಚುರಪಡಿಸಲು ಕ್ರಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT