ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಜೆಟ್: ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆ

Last Updated 4 ಮಾರ್ಚ್ 2022, 11:11 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 'ಪುಣ್ಯಕೋಟಿ ದತ್ತು ಯೋಜನೆ' ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಘೋಷಿಸಿದ್ದಾರೆ.

ಬೊಮ್ಮಾಯಿ ಅವರು ಇಂದು (ಮಾ.04) ವಿಧಾನಸಭೆಯಲ್ಲಿ 2022–23ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು,ರಾಜ್ಯದ ಗೋಶಾಲೆಗಳಲ್ಲಿರುವ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ ₹ 11,000ಕ್ಕೆ ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸುವ ಸಲುವಾಗಿ 'ಪುಣ್ಯಕೋಟಿ ದತ್ತು ಯೋಜನೆ' ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಗೋವುಗಳ ರಕ್ಷಣೆಗೆ ಬಿಜೆಪಿ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದ ಅವರು, ರಾಜ್ಯದಲ್ಲಿ ಕಳೆದ ವರ್ಷ ಜಾರಿಗೊಳಿಸಲಾಗಿರುವ ಗೋ ಹತ್ಯಾ ನಿಷೇಧ ಅಧಿನಿಯಮ–2020ರ ಹಿನ್ನೆಲೆಯಲ್ಲಿ, ಸದ್ಯ ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31ರಿಂದ 100ಕ್ಕೆ ಹೆಚ್ಚಿಸಲಾಗುವುದು. ಈ ಉದ್ದೇಶಕ್ಕೆ ₹ 50 ಕೋಟಿ ಅನುದಾನ ನೀಡಲಾಗುವುದು ಎಂದಿದ್ದಾರೆ.

ರಾಜ್ಯದ ಗೋ ತಳಿಗಳ ಸಂರಕ್ಷಣೆಯನ್ನು ಗಮನದಲ್ಲಿರಿಸಿ, ಗೋ ಸಂತತಿಯನ್ನು ಹೆಚ್ಚಿಸುವ ಉದ್ದೇಶದಿಂದ ಕೆಎಂಎಫ್‌ ಮೂಲಕ 2 ಸಾವಿರ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲಾಗುವುದುಎಂದೂ ಮಾಹಿತಿ ನೀಡಿದ್ದಾರೆ.

ಕುರಿ/ಮೇಕೆಗಳು ಮೃತಪಟ್ಟರೆ ನೀಡುವ ಪ್ರೋತ್ಸಾಹ ಧನ ಹೆಚ್ಚಳ
3ರಿಂದ 6ತಿಂಗಳೊಳಗಿನ ಕುರಿ/ಮೇಕೆಗಳುಆಕಸ್ಮಿಕವಾಗಿ ಮೃತಪಟ್ಟರೆ'ಅನುಗ್ರಹ ಕೊಡುಗೆ ಯೋಜನೆ' ಅಡಿಯಲ್ಲಿ ನೀಡುವ ಪರಿಹಾರವನ್ನು ₹ 2,500 ಬದಲಿಗೆ ₹ 3,500 ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕುರಿ ಅಥವಾ ಮೇಕೆ ಸಾಕುವವರು, ವಲಸೆ ಕುರಿಗಾಹಿಗಳು ಆಕಸ್ಮಿಕವಾಗಿ ಮೃತಪಟ್ಟರೆ, ಅವರ ಮೇಲೆ ಅವಲಂಬಿತವಾಗಿರುವ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಲು ಕುರಿಗಾಹಿಗಳಿಗೆ ಐದು ಲಕ್ಷ ವಿಮಾ ಸೌಲಭ್ಯ ಒದಗಿಸಲಾಗುವುದು.

ಕುರಿ ದೊಡ್ಡಿ ನಿರ್ಮಾಣಕ್ಕೆ ₹ 5 ಲಕ್ಷ ಸಹಾಯಧನ ನೀಡಲಾಗುವುದು ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT