ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಜೆಟ್–2022: ಮರಾಠ ಅಭಿವೃದ್ಧಿ ನಿಗಮಕ್ಕೆ ₹ 50 ಕೋಟಿ

Last Updated 4 ಮಾರ್ಚ್ 2022, 11:15 IST
ಅಕ್ಷರ ಗಾತ್ರ

ಬೆಂಗಳೂರು:ಮರಾಠಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ ₹ 50 ಕೋಟಿ ಅನುದಾನ ನೀಡುವುದಾಗಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಸವರಾಜಬೊಮ್ಮಾಯಿ ಅವರು ಇಂದು (ಮಾ.04) ವಿಧಾನಸಭೆಯಲ್ಲಿ 2022–23ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ನಿಗಮಗಳ ಅಡಿ ₹ 400 ಕೋಟಿ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮದ ಅಡಿ ಬರುವ ಇತರ ಹಿಂದುಳಿದ ಸಮುದಾಯಗಳಿಗೆ ₹ 400 ಕೋಟಿ ಯೋಜನೆ ಘೋಷಿಸಲಾಗಿದೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಹಾಗೂ ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ತಲಾ ₹ 100 ಕೋಟಿ ಅನುದಾನ ನೀಡಲಾಗಿದ್ದು,ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ₹ 50 ಕೋಟಿ ಮೊತ್ತದ ಯೋಜನೆ ರೂಪಿಸುವುದಾಗಿಪ್ರಕಟಿಸಲಾಗಿದೆ. ಅದೇರೀತಿ, ಜೈನ, ಸಿಖ್ ಮತ್ತು ಬೌದ್ಧ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ₹ 50 ಕೋಟಿ ಮೊತ್ತದ ಯೋಜನೆಗೆ ಕ್ರಮ ಕೈಗೊಳ್ಳುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ.

‘ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಅಡಿಯಲ್ಲಿರುವ ಎಲ್ಲಾ ಅಭಿವೃದ್ಧಿ ನಿಗಮಗಳ ಸ್ವಯಂ ಉದ್ಯೋಗ ಮತ್ತು ಇತರೆ ಕಾರ್ಯಕ್ರಮಗಳ ಗುರಿಯಲ್ಲಿ ಮಹಿಳೆಯರಿಗೆ ಶೇ.25ರಷ್ಟು ಮೀಸಲಾತಿ ಕಲ್ಪಿಸುವುದಾಗಿ’ ಎಂದು ಬೊಮ್ಮಾಯಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT