ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget: 2024ರ ಒಲಿಂಪಿಕ್ಸ್‌ಗಾಗಿ ಶ್ರೇಷ್ಠ ಮಟ್ಟದ ತರಬೇತಿ

Last Updated 4 ಮಾರ್ಚ್ 2022, 12:37 IST
ಅಕ್ಷರ ಗಾತ್ರ

ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 2024ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್‌ಗೆ ರಾಜ್ಯದಿಂದ ಕನಿಷ್ಠ 75 ಕ್ರೀಡಾಪಟುಗಳನ್ನು ಸಿದ್ಧಪಡಿಸಲು 'ಅಮೃತ ಕ್ರೀಡಾ ದತ್ತು ಯೋಜನೆ'ಯಡಿ ತಲಾ 10 ಲಕ್ಷ ರೂ.ಗಳವರೆಗೆ ಪ್ರತಿ ವರ್ಷ ಶ್ರೇಷ್ಠ ಮಟ್ಟದ ತರಬೇತಿ ಪಡೆಯಲು ವಿನಿಯೋಗಿಸಲಾಗುವುದು ಎಂದು ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡೆಗೆ ಪ್ರೋತ್ಸಾಹ:
*ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪುಗಳ ರಚನೆ.
*ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಂಗಣ ಉನ್ನತೀಕರಣಕ್ಕೆ 100 ಕೋಟಿ ರೂ. ಗಳ ಸಮಗ್ರ ಯೋಜನೆ.
*ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 504 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಅಂಕಣ ನಿರ್ಮಾಣ
*ಸಾಹಸ ಕ್ರೀಡಾ ಮೂಲಸೌಕರ್ಯ ಒದಗಿಸಿ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಉನ್ನತೀಕರಣಕ್ಕೆ ಕ್ರಮ.
*ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಆಯೋಜನೆ. ಈ ಕ್ರೀಡಾಕೂಟದಲ್ಲಿ 8,000ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ 20 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಸಂಘಟಿಸಲಾಗುವುದು.
*50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಕ್ರೀಡಾಪಟುಗಳಿಗೆ ನೀಡುತ್ತಿರುವ ಮಾಸಾಶನವನ್ನು 1,000 ರೂ.ನಂತೆ ಹೆಚ್ಚಿಸಲು ನಿರ್ಧಾರ.
* ಕೇಂದ್ರ ಪ್ರಾಯೋಜಕತ್ವದ ಎನ್.ಎಸ್.ಡಿ.ಎಫ್. ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕಾಗಿ 20 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಏನೇನಿದೆ? ಇಲ್ಲಿವೆ ಮುಖ್ಯಾಂಶಗಳು
ರಾಜ್ಯ ಬಜೆಟ್: ನವ ಭಾರತಕ್ಕಾಗಿ ನವಕರ್ನಾಟಕ: ರಾಜ್ಯ ಅಭಿವೃದ್ಧಿಗೆ ಪಂಚಸೂತ್ರಗಳು
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
ಕರ್ನಾಟಕ ಬಜೆಟ್–2022: ಯಾವ ವಲಯಕ್ಕೆ ಎಷ್ಟು ಅನುದಾನ?
Karnataka Budget: ಯಕ್ಷಗಾನ ಸಮ್ಮೇಳನ, ಕಾಸರಗೋಡು, ಗೋವಾದಲ್ಲಿ ಕನ್ನಡ ಭವನ ಘೋಷಣೆ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT