ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಗಳು ಏನು?

Last Updated 17 ಫೆಬ್ರುವರಿ 2023, 11:15 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿ ಸೇರಿದಂತೆ ಕ್ರೀಡಾ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಇಲ್ಲಿದೆ ಮಾಹಿತಿ:

*ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

*ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ ₹100 ಕೋಟಿ ಅನುದಾನ ಮೀಸಲಿಡಲಾಗಿದೆ.

*ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ ₹25 ಲಕ್ಷಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು.

*ಬಾಸ್ಕೆಟ್ ಬಾಲ್ ಮತ್ತು ವಾಲಿಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.

*ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.

*ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು.

*ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ ₹50 ಕೋಟಿ ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ (Karnataka Olympic Dream Project Fund) ಸ್ಥಾಪಿಸಲಾಗುವುದು. ಈ ಯೋಜನೆಯಡಿ 12ರಿಂದ 19 ವರ್ಷ ವಯೋಮಾನದ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.

ಇದನ್ನೂ ಓದಿ:














ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT