ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಜಿಮ್ಸ್‌‌ನಲ್ಲಿ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ₹70 ಕೋಟಿ

Published 7 ಜುಲೈ 2023, 8:12 IST
Last Updated 7 ಜುಲೈ 2023, 8:12 IST
ಅಕ್ಷರ ಗಾತ್ರ

ಕಲಬುರಗಿ: ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಜಿಮ್ಸ್‌) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ₹70 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಶುಕ್ರವಾರ 2023–24ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಲ್ಲಿ ಅವರು ಘೋಷಿಸಿದರು.

ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ ₹155 ಕೋಟಿ ಒದಗಿಸಲಾಗುವುದು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ ಕಾರ್ಯಾಚರಣೆಗೆ ₹ 30 ಕೋಟಿ ಒದಗಿಸಲಾಗುವುದು. ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ.

ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ ₹ 20 ಕೋಟಿ ನೀಡಲಾಗುವುದು’ ಎಂದರು.

ಟ್ರಾಮಾ ಕೇಂದ್ರವು ಶೀಘ್ರ ಕಾರ್ಯಾಚರಣೆಗೆ ಅನುವಾಗುವಂತೆ ಜಿಲ್ಲೆಯವರೇ ಆದ ವೈದ್ಯಕೀಯ ‌ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ‌ಡಾ. ಶರಣಪ್ರಕಾಶ ಪಾಟೀಲ ವಿಶೇಷಾಧಿಕಾರಿಯನ್ನು ನೇಮಕ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT