ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2023: ಬ್ರ್ಯಾಂಡ್ ಬೆಂಗಳೂರಿಗೆ ಭರ್ಜರಿ ಕೊಡುಗೆ

Published 7 ಜುಲೈ 2023, 8:22 IST
Last Updated 7 ಜುಲೈ 2023, 8:22 IST
ಅಕ್ಷರ ಗಾತ್ರ

ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ. ಜತೆಗೆ 2026ಕ್ಕೆ ವಿಮಾನ ನಿಲ್ದಾಣ ಮಾರ್ಗದ ಮೆಟ್ರೊ ಸಂಚಾರ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.

‘ನಗರೋತ್ಥಾನ, ಅಧಿಕ ಸಾಂದ್ರತೆಯ ಕಾರಿಡಾರ್, ವೈಟ್ ಟಾಪಿಂಗ್‌ ರಸ್ತೆ, ತ್ಯಾಜ್ಯ ನಿರ್ವಹಣೆ, ರಾಜಕಾಲುವೆಗಳ ತೆರವು ಮತ್ತು ದುರಸ್ತಿ, ರಸ್ತೆ ಗುಂಡಿ ಮುಚ್ಚುವುದು ಹಾಗೂ ಸದ್ಯ ಪ್ರಗತಿಯಲ್ಲಿರುವ ಯೋಜನೆಗಳಿಗೆ ₹12 ಸಾವಿರ ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಸಂಚಾರ ದಟ್ಟಣೆ ನಿವಾರಣೆಗೆ ನಮ್ಮ ಮೆಟ್ರೊ ಯೋಜನೆ ಹಾಗೂ ಉಪನಗರ ರೈಲು ಯೋಜನೆಗಳಿಗಾಗಿ ₹30ಸಾವಿರ ಕೋಟಿ ನೀಡುವುದಾಗಿ ಹೇಳಿದೆ. ಬೈಯಪ್ಪನಹಳ್ಳಿ ಪ್ರದೇಶದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ತಲುಪಲು ಅನುಕೂಲವಾಗುವಂತೆ ಬೈಯಪ್ಪನಹಳ್ಳಿ– ಕೃಷ್ಣರಾಜಪುರ, ಕೆಂಗೇರಿ– ಚಳ್ಳಘಟ್ಟ, ನಾಗಸಂದ್ರ– ಮಾದಾವರ, ಆರ್‌.ವಿ.ರಸ್ತೆ– ಬೊಮ್ಮಸಂದ್ರ ಸೇರಿದಂತೆ ಒಟ್ಟು 27 ಕಿ.ಮೀ. ಉದ್ದದ ನೂತನ ಮೆಟ್ರೋ ಮಾರ್ಗ ಆರಂಭಕ್ಕೆ ಕ್ರಮ ₹263 ಕೋಟಿ ವೆಚ್ಚದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜಿಸಲಾಗಿದೆ.

ಮೂರು ವರ್ಷಗಳಲ್ಲಿ ಈಗಿರುವ 70 ಕಿ.ಮೀ. ಮೆಟ್ರೊ ಸಂಪರ್ಕ ಜಾಲವನ್ನು 176 ಕಿ.ಮೀಗೆ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. 2026ರಲ್ಲಿ ವಿಮಾನನಿಲ್ದಾಣ ಮೆಟ್ರೊ ಲೈನ್ ಕಾರ್ಯಾರಂಭ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಮೇಲ್ದರ್ಜೆಗೆ ₹1411ಕೋಟಿ ಅನುದಾನ, 100 ಕಿ.ಮೀ. ರಸ್ತೆಗಳ ವೈಟ್ ಟಾಪಿಂಗ್‌ಗೆ ₹800 ಕೋಟಿ ಅನುದಾನ ಘೋಷಿಸಲಾಗಿದೆ. ಅಧಿಕ ಸಂಚಾರ ದಟ್ಟಣೆ ಇರುವ 192 ಕಿ.ಮೀ. ಉದ್ದದ 12 ಪ್ರಮುಖ ರಸ್ತೆಗಳಾದ ‘ಹೈ ಡೆನ್ಸಿಟಿ ಕಾರಿಡಾರ್‌’ ಅಭಿವೃದ್ಧಿಗೆ ₹273 ಕೋಟಿ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಜತೆಗೆ ರಾಜಕಾಲುವೆ ಒತ್ತುವರಿಯನ್ನು ಕಂದಾಯ ಇಲಾಖೆ ಗುರುತಿಸಿದ ಸ್ಥಳಗಳಲ್ಲಿ ತೆರವಿಗೆ ಕ್ರಮ ವಹಿಸುವುದಾಗಿಯೂ ಬಜೆಟ್‌ನಲ್ಲಿ ಹೇಳಲಾಗಿದೆ.

ಇವುಗಳನ್ನೂ ಓದಿ..

Karnataka Budget 2023: ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ ಪೂರ್ಣ ಮಾಹಿತಿ ಇಲ್ಲಿದೆ..

Karnataka Budget 2023 |ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT