ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು

Last Updated 17 ಫೆಬ್ರವರಿ 2023, 10:20 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಮುಂಗಡಪತ್ರದಲ್ಲಿ ಅಡಕವಾಗಿರುವ ಪ್ರಮುಖ 10 ಅಂಶಗಳು ಇಲ್ಲಿವೆ.

  1. ರೈತರಿಗೆ ನೀಡಲಾಗುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿ ₹3 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ. 25 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ.
  2. ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ. 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
  3. ಹಳ್ಳಿ ಮುತ್ತು ಯೋಜನೆ: ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದಿ, ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾಗುವ 500 ವಿದ್ಯಾರ್ಥಿಗಳ ಸಂಪೂರ್ಣ ಶುಲ್ಕ ಭರಿಸಲು ಕ್ರಮ
  4. ಮನೆಮನೆಗೆ ಆರೋಗ್ಯ ಕಾರ್ಯಕ್ರಮದಡಿ ಗ್ರಾಮೀಣ ಜನತೆಯ ಸಮಗ್ರ ಆರೋಗ್ಯ ತಪಾಸಣೆಗೆ 2023-24ರಲ್ಲಿ ಎರಡು ಬಾರಿ ಆರೋಗ್ಯ ಶಿಬಿರ ಆಯೋಜನೆ
  5. ಆರೋಗ್ಯ ಸೇವೆಗಳ ಡಿಜಿಟಲೀಕರಣ. ರೋಗಿಗಳ ಆರೋಗ್ಯ ದಾಖಲೆಗಳ ಸುರಕ್ಷಿತ ಕ್ರೋಡೀಕರಣಕ್ಕೆ ಕ್ರಮ
  6. ರಾಯಚೂರಿನಲ್ಲಿ ಏಮ್ಸ್ ಮಾದರಿಯ ಆಸ್ಪತ್ರೆ ಹಾಗೂ ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ
  7. ಮಹಿಳಾ ಸಬಲೀಕರಣಕ್ಕೆ ಗೃಹಿಣಿ ಶಕ್ತಿ ಯೋಜನೆ - ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ ₹500 ಸಹಾಯಧನ. 30 ಲಕ್ಷ ಕಾರ್ಮಿಕ ಮಹಿಳೆಯರಿಗೆ ಉಚಿತ ಬಸ್ ಪಾಸ್ (1000 ಕೋಟಿ)
  8. ವಿದ್ಯಾವಾಹಿನಿ ಯೋಜನೆಯಡಿ, ಶಾಲಾ ಕಾಲೇಜುಗಳ 8 ಲಕ್ಷ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ (350 ಕೋಟಿ)
  9. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನಿವೃತ್ತಿ ಉಪಧನಕ್ಕಾಗಿ 40 ಕೋಟಿ ಅನುದಾನ; ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ತಯಾರಕಿಯರು, ಆಶಾ ಕಾರ್ಯಕರ್ತೆಯರ ಗೌರವ ಧನ 1 ಸಾವಿರ ರೂ. ಹೆಚ್ಚಳ
  10. ನಮ್ಮ ಜಿಲ್ಲೆ ನಮ್ಮ ಸಂಸ್ಕೃತಿ ಕಾರ್ಯಕ್ರಮದಡಿ ಪ್ರತಿ ಜಿಲ್ಲೆಯಲ್ಲಿ ಜಾನಪದ ಹಬ್ಬ ಆಯೋಜನೆ

ಇವನ್ನೂ ಓದಿ:

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT