ಶುಕ್ರವಾರ, ಮಾರ್ಚ್ 24, 2023
23 °C

Karnataka Budget 2023 | ಬಜೆಟ್‌ನಲ್ಲಿ ನೇಕಾರರಿಗೆ ನೆರವು: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನೇಕಾರರು ಕಚ್ಚಾ ವಸ್ತು ಖರೀದಿಯಿಂದ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವವರೆಗೆ ಅನುಕೂಲವಾಗುವಂತೆ ಬಜೆಟ್‌ನಲ್ಲಿ ನೆರವು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ‘ನೇಕಾರರ ಮೂಲ ವೃತ್ತಿ ಉಳಿಯಬೇಕು. ಅದರ ಜತೆಯಲ್ಲೇ ಅವರ ಮಕ್ಕಳು ಬೇರೆ ಬೇರೆ ವೃತ್ತಿಗಳನ್ನು ಆಯ್ದುಕೊಳ್ಳಲು ಅವಕಾಶ ಆಗಬೇಕು. ಅದಕ್ಕೆ ಪೂರಕವಾಗಿ ಸರ್ಕಾರ ಸಹಾಯ ಮಾಡಲಿದೆ’ ಎಂದರು.

ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಲು ನೇಕಾರರು ಉತ್ಪಾದಿಸುವ ಬಟ್ಟೆಯನ್ನು ಸಂಪೂರ್ಣವಾಗಿ ಖರೀದಿಸಲು ಆದೇಶ ನೀಡಲಾಗಿದೆ. ನೇಕಾರ ಸಮ್ಮಾನ್‌ ಯೋಜನೆ ನೆರವು ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನೂ ಸರ್ಕಾರ ಈಡೇರಿಸಿದೆ. ಸಾಲ ಮತ್ತು ಸಹಾಯಧನ ಹೆಚ್ಚಳ, ಕಾಟೇಜ್‌ ಉದ್ದಿಮೆಯನ್ನಾಗಿ ಪರಿಗಣಿಸುವುದು ಸೇರಿದಂತೆ ನೇಕಾರರ ಇನ್ನೂ ಕೆಲವು ಬೇಡಿಕೆಗಳನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ತಪಸೀಹಳ್ಳಿ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ, ನೆಲಮಂಗಲ ಸಮೀಪದ ಅರಿಶಿನಕುಂಟೆಯ ತೈಲೇಶ್ವರ ಗಾಣಿಗರ ಮಹಾಸಂಸ್ಥಾನದ ಪೂರ್ಣಾನಂದಪುರಿ ಸ್ವಾಮೀಜಿ, ಸಚಿವ ಕೆ.ಸಿ.ನಾರಾಯಣಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ತೊಗಟವೀರ ಕ್ಷತ್ರಿಯ ನೇಕಾರ ಸಂಘದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ಅಖಿಲ ಭಾರತ ತೊಗಟವೀರ ಕ್ಷತ್ರಿಯ ಸಂಘದ ಅಧ್ಯಕ್ಷ ಎಸ್. ಹರೀಶ್, ಬಿಜೆಪಿ ಮುಖಂಡ ಎಂ.ಡಿ ಲಕ್ಷ್ಮೀನಾರಾಯಣ, ಪುಷ್ಪಾಂಡಜ ಆಶ್ರಮ ಗುರುಪೀಠ ಟ್ರಸ್ಟ್‌ ಅಧ್ಯಕ್ಷ ಸಿ. ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.