ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2024 | ವಿದ್ಯುತ್‌: 60 ಸಾವಿರ ಮೆ. ವಾಟ್‌ಗೆ ಹೆಚ್ಚಿಸುವ ಗುರಿ

Published 17 ಫೆಬ್ರುವರಿ 2024, 0:24 IST
Last Updated 17 ಫೆಬ್ರುವರಿ 2024, 0:24 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್‌ ಉತ್ಪಾದನೆ‌ ಹೆಚ್ಚಿಸಲು ಹಿಂದಿನ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ದಿನಗಳಲ್ಲಿ ಈ ವಲಯವನ್ನು ಹೂಡಿಕೆದಾರರ ಸ್ನೇಹಿಯನ್ನಾಗಿ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

‌ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಹೀಗಾಗಿ, ಮುಂದಿನ 7 ವರ್ಷಗಳಲ್ಲಿ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಮೂಲಕ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು 32,000 ಮೆಗಾವಾಟ್‌ನಿಂದ 60,000 ಮೆಗಾವಾಟ್‌ಗಳಿಗೆ ಹೆಚ್ಚಿಸಲಾಗುವುದು ಎಂದು ವಿವರಿಸಿದ್ದಾರೆ.

ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ’ಪಿಎಂ–ಕುಸುಮ‘ ಯೋಜನೆಯಡಿ ₹1,174 ಕೋಟಿ ಅಂದಾಜು ವೆಚ್ಚದಲ್ಲಿ 40,000 ಜಾಲ ಮುಕ್ತ ಸೋಲಾರ್ ಪಂಪ್‌ಸೆಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ‌ 30ರಷ್ಟಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇ 30ರಿಂದ ಶೇ‌ 50ಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ.

ಹಸಿರು ಹೈಡ್ರೋಜನ್ ಭವಿಷ್ಯದ ಇಂಧನ. ಹಸಿರು ಹೈಡ್ರೋಜನ್ ನೀತಿಯನ್ನು ರೂಪಿಸಲಾಗುವುದು. ಖಾಸಗಿ ಬಂಡವಾಳವನ್ನು ಈ ವಲಯಕ್ಕೆ ಆಕರ್ಷಿಸಲು 300 ಕಿಲೋವಾಟ್‌ ಸಾಮರ್ಥ್ಯದ ಹಸಿರು‌ ಹೈಡ್ರೋಜನ್ ಸ್ಥಾವರವನ್ನು ಪ್ರಾಯೋಗಿಕವಾಗಿ ಅಂದಾಜು ₹10 ಕೋಟಿ ವೆಚ್ಚದಲ್ಲಿ ಕೆಆರ್‌ಇಡಿಎಲ್‌ ವತಿಯಿಂದ ಅನುಷ್ಠಾನಗೊಳಿಸಲಾಗುವುದಾಗಿ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

4.30 ಲಕ್ಷ ಕೃಷಿಪಂಪಸೆಟ್‌ಗಳಿಗೆ ಸೌರಶಕ್ತಿ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಜತೆಗೆ, ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು 2,500 ಇವಿ ಚಾರ್ಜಿಂಗ್‌ ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ, ವಿದ್ಯುತ್ ಸರಬರಾಜು ಕಂಪನಿಗಳ ಮೂಲಕ ₹35 ಕೋಟಿ ವೆಚ್ಚದಲ್ಲಿ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT