ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಅವುಗಳ ವಿವರ ಇಂತಿವೆ:

ತೋಟಗಾರಿಕೆ

ಆಯ್ದ ಜಿಲ್ಲೆಗಳಲ್ಲಿ ‘ಕಿಸಾನ್ ಮಾಲ್’ಗಳನ್ನು ಸ್ಥಾಪಿಸಲ ನಿರ್ಧರಿಸಲಾಗಿದೆ. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ ಮಾಹಿತಿಗಳೊಂದಿಗೆ ಬೇಸಾಯ ಪರಿಕರಗಳ ಮತ್ತು ಉತ್ಪನ್ನಗಳೂ ಈ ಮಾಲ್‌ಗಳಲ್ಲಿ ಲಭ್ಯ ಇರಲಿವೆ

ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತ ಅಂತರರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ

ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತು ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇಂದ್ರ

ರಾಜ್ಯದಲ್ಲಿ ಸಾಂಬಾರ ಬೆಳೆಗಾರರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ‘ಸ್ಪೈಸ್ ಪಾರ್ಕ್’

ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು

ಪಶುಸಂಗೋಪನೆ

ಆಯ್ದ 20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು ₹10 ಕೋಟಿ ಮೀಸಲು

ಬಾಡಿಗೆ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹10 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡಗಳು

ಮೀನುಗಾರಿಕೆ

ಹೊನ್ನಾವರ ತಾಲ್ಲೂಕಿನ ಮಂಕಿ, ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ. ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ, ಅಕ್ವಾ ಪಾರ್ಕ್‌ಗಳು

ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರಬಂದರು

₹7 ಕೋಟಿ ವೆಚ್ಚದಲ್ಲಿ ಪ್ರಥಮ ಸಮುದ್ರ ಆಂಬುಲೆನ್ಸ್ ಖರೀದಿ

ನಬಾರ್ಡ್ ಸಹಯೋಗದಲ್ಲಿ ₹20 ಕೋಟಿ ವೆಚ್ಚದಲ್ಲಿ 16 ಮೀನುಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣ

ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಗೆ ₹6 ಕೋಟಿ

ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು ₹50 ಕೋಟಿ ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ ₹40 ಕೋಟಿ ವೆಚ್ಚದಲ್ಲಿ ಶೀತಲಗೃಹಗಳು

ರಾಯಚೂರಿನಲ್ಲಿ ₹25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಒಣ ಮೆಣಸಿನಕಾಯಿ ಮಾರುಕಟ್ಟೆ

ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳಲ್ಲಿ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಸಿಎನ್‌ಜಿ ಗ್ಯಾಸ್ ಪ್ಲಾಂಟ್ ಸ್ಥಾಪನೆ, ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳಾಗಿ ಪರಿವರ್ತನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.