ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Budget: ‌ಮೂರು ಕಾಲು ಗಂಟೆಯಲ್ಲಿ ₹3.71ಲಕ್ಷ ಕೋಟಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ

Published 16 ಫೆಬ್ರುವರಿ 2024, 2:09 IST
Last Updated 16 ಫೆಬ್ರುವರಿ 2024, 9:37 IST
ಅಕ್ಷರ ಗಾತ್ರ
01:5716 Feb 2024

ರಾಜ್ಯದ ಅಭಿವೃದ್ಧಿಯ ಮುನ್ನೋಟ ನೀಡುವ 2024–25ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಿದ 15ನೇ ಬಜೆಟ್ ಆಗಿದೆ.

01:5716 Feb 2024

ಬಜೆಟ್ ಮೊತ್ತ ₹3.80 ಲಕ್ಷ ಕೋಟಿಗೆ ಏರಿಕೆ?

ಲೋಕಸಭೆ ಚುನಾವಣೆ ಎದುರುಗೊಳ್ಳುವ ಹೊತ್ತಿನೊಳಗೆ, ಮತದಾರರನ್ನು ಕಾಂಗ್ರೆಸ್‌ ಪಕ್ಷದತ್ತ ಸೆಳೆಯುವ ಹೊಸ ಜನಪ್ರಿಯ ಘೋಷಣೆ, ಚುನಾವಣೆ ಕಾರಣಕ್ಕೆ ಹೊಸ ತೆರಿಗೆಯ ಭಾರ ಹಾಕದಿರುವ ಬಜೆಟ್ ಇದಾಗಿರಲಿದೆ. ಜುಲೈನಲ್ಲಿ ಸಿದ್ದರಾಮಯ್ಯ ಮಂಡಿಸಿದ್ದ ಪರಿಷ್ಕೃತ ಬಜೆಟ್‌ನ ಮೊತ್ತ ₹3.27 ಲಕ್ಷ ಕೋಟಿಯಾಗಿತ್ತು. ಈ ಬಾರಿ ಬಜೆಟ್‌ ಮೊತ್ತ ₹3.50 ಲಕ್ಷ ಕೋಟಿ ಅಥವಾ ₹3.80 ಲಕ್ಷ ಕೋಟಿಗೆ ತಲುಪುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರದ ಬರೆಯ ಮಧ್ಯೆ ವಿತ್ತೀಯ ಶಿಸ್ತಿನ ಪರಿಮಿತಿಯಲ್ಲಿ ವೆಚ್ಚ, ಸಂಪನ್ಮೂಲ ಕ್ರೋಡೀಕರಣದ ‘ಲೆಕ್ಕಾಚಾರ’ಗಳು ಈ ಬಜೆಟ್‌ ಮೇಲಿನ ಕುತೂಹಲ ಹೆಚ್ಚಿಸಿವೆ.

02:1316 Feb 2024

ಹಲವು ನಿರೀಕ್ಷೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಆರ್ಥಿಕ ಭಾರ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು, ಸಹಾಯಾನುದಾನ ಕೊರತೆಯ ಮಧ್ಯೆಯೇ ಜನಪ್ರಿಯ ಬಜೆಟ್ ಮಂಡಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಗ್ಯಾರಂಟಿಗಳಿಗಾಗಿಯೇ ₹58 ಸಾವಿರ ಕೋಟಿ ತೆಗೆದಿಡಬೇಕಾಗುತ್ತದೆ ಎಂದು ಅಂದಾಜಿಸಲಾಗಿದೆ. ರೈತ ಸಮುದಾಯ, ಕೈಗಾರಿಕಾ ವಲಯ, ಕಾರ್ಮಿಕ ಸಂಘಟನೆಗಳು ನಾನಾ ಬೇಡಿಕೆಗಳನ್ನು ಮುಂದಿಟ್ಟಿವೆ. ತೀವ್ರ ಬರದಿಂದ ರೈತ ವರ್ಗ ಸಂಕಷ್ಟದಲ್ಲಿದೆ. ಕೇಂದ್ರದಿಂದ ಇನ್ನೂ ಬಿಡುಗಡೆಯಾಗದ ಬರ ಪರಿಹಾರ ಮುಖ್ಯಮಂತ್ರಿ ಅವರನ್ನು ಒತ್ತಡಕ್ಕೆ ಸಿಲುಕಿಸಿದೆ. ಬರ ಇರುವ ಕಾರಣಕ್ಕೆ ಈ ಬಾರಿ ರೈತರ ಸಾಲವನ್ನು ಸಂಪೂರ್ಣವಾಗಿ ಒಮ್ಮೆ ಮನ್ನಾ ಮಾಡಲಿ ಎನ್ನುವುದು ರೈತ ಸಮುದಾಯದ ನಿರೀಕ್ಷೆಯಾಗಿದೆ.

02:1616 Feb 2024

ವಸತಿ ಯೋಜನೆಗಳಿಗೆ ಆದ್ಯತೆ ಸಿಗಲಿದೆಯೇ?

ಗ್ರಾಮೀಣ ಮತ್ತು ನಗರ ಭಾಗದ ಜನರಿಗೆ ಸೂರು ಹೊಂದುವ ದಶಕಗಳ ಕನಸು ಇನ್ನೂ ಪೂರ್ಣ ಪ್ರಮಾಣದಲ್ಲಿ ಈಡೇರಿಲ್ಲ. ಮಧ್ಯಮ ವರ್ಗ ಮತ್ತು ಕೂಲಿ ಕಾರ್ಮಿಕರು ನಗರದಲ್ಲಿ ಸ್ವಂತ ಸೂರು ಕಾಣುವುದು ಕನಸಾಗಿಯೇ ಉಳಿದಿದೆ. ವಿಶೇಷ ವಸತಿ ಯೋಜನೆಗಳನ್ನು ರೂಪಿಸಿ, ಪ್ರತಿಯೊಬ್ಬರಿಗೂ ಸೂರು (ಮನೆ) ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಇದೆ. ಇದಕ್ಕೆ ಎಷ್ಟರಮಟ್ಟಿಗೆ ಬಜೆಟ್‌ನಲ್ಲಿ ಆದ್ಯತೆ ಸಿಗಲಿದೆ ಎಂಬ ಕುತೂಹಲವಂತೂ ಇದೆ.

02:3416 Feb 2024

ಸಂಭಾವ್ಯ ಹೊಸ ಘೋಷಣೆಗಳು

* ಕರ್ನಾಟಕ ರಾಜ್ಯ ಉದಯವಾಗಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹೊತ್ತಿನಲ್ಲಿ ಹಲವು ಹೊಸ ಯೋಜನೆಗಳು

* ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಜಾರಿ ಕುರಿತು ಪ್ರಸ್ತಾವ ಮತ್ತು ಅನುದಾನ ನೀಡಿಕೆ

* ಹೊಸ ಜಿಲ್ಲೆಗಳಾಗಿ ಚಿಕ್ಕೋಡಿ, ಗೋಕಾಕ, ಮಧುಗಿರಿ

* ಮಹಿಳೆಯರಿಗಾಗಿ ವಿಶೇಷ ಯೋಜನೆಗಳು

* ರಾಮಮಂದಿರಗಳ ಪುನುರುತ್ಥಾನಕ್ಕೆ ₹100 ಕೋಟಿ ಅನುದಾನ

* ಮೇಕೆದಾಟು ಯೋಜನೆಗೆ ಅನುದಾನ

* ಬೆಂಗಳೂರು ಅಥವಾ ಕಲಬುರಗಿಯಲ್ಲಿ ವಚನ ಮಂಟಪ ಮತ್ತು ವಚನ ವಿಶ್ವವಿದ್ಯಾಲಯ

* ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಬ್ರ್ಯಾಂಡ್‌ ಬೆಂಗಳೂರಿಗೆ ಆದ್ಯತೆ

* ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ

* ಬಂಜಾರ, ವಾಲ್ಮೀಕಿ, ಬೋವಿ, ಮಾದಿಗರ ಜತೆಗೆ ಹಿಂದುಳಿದ ವಿವಿಧ ಜಾತಿಗಳಿಗೆ ಆರ್ಥಿಕ ನೆರವು

04:1316 Feb 2024

ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ: ಕೆಲವೇ ಹೊತ್ತಿನಲ್ಲಿ ಸಂಪುಟ ಸಭೆ

04:1916 Feb 2024

ಬಜೆಟ್ ಪ್ರತಿಯೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ

04:3416 Feb 2024

ವಿಧಾನಸೌಧದಲ್ಲಿ ಸಂಪುಟ ಸಭೆ ಆರಂಭ

04:3516 Feb 2024

ಬಜೆಟ್‌ಗೆ ಸಂಪುಟ ಸಭೆಯಲ್ಲಿ ಅನುಮೋದನೆ

04:3516 Feb 2024

ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡಿಸಲಿರುವ ಸಿಎಂ