ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Budget 2024 |ನೇತ್ರಾವತಿಯಲ್ಲಿ ಜಲಮೆಟ್ರೊ

Published 17 ಫೆಬ್ರುವರಿ 2024, 0:30 IST
Last Updated 17 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

*ಮೂಲಸೌಕರ್ಯ ಯೋಜನೆಗಳ ಪ್ರಗತಿ ಮೇಲ್ವಿಚಾರಣೆಗೆ ಹಾಗೂ ಎದುರಾಗುವ ಅಂತರ್ ಇಲಾಖಾ ಮತ್ತು ಹಣಕಾಸಿನ ತೊಡಕುಗಳನ್ನು ಬಗೆಹರಿಸಲು ಮುಖ್ಯಮಂತ್ರಿ ಕಚೇರಿಯಲ್ಲಿ ಪ್ರತ್ಯೇಕ ಘಟಕ ಸ್ಥಾಪನೆ

*ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ತೀರವನ್ನು ಆರ್ಥಿಕ ಅಭಿವೃದ್ಧಿಗೆ ಸಮರ್ಥವಾಗಿ ಬಳಸಿಕೊಳ್ಳಲು ಆದ್ಯತೆ. ₹ 20,000 ಕೋಟಿ ಹೂಡಿಕೆಯೊಂದಿಗೆ ಸಮುದ್ರ ಸಾರಿಗೆ, ಸರಕು ಸಾಗಣೆ ಹಾಗೂ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಗಣನೀಯ ಅಭಿವೃದ್ಧಿ ಸಾಧಿಸುವ ಗುರಿ

*ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರು ಅಭಿವೃದ್ಧಿಪಡಿಸಲು ಐಐಟಿ ಮದ್ರಾಸ್ ಸಹಯೋಗದಲ್ಲಿ ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ

*ದ್ವೀಪಗಳ ಸಮಗ್ರ ಅಭಿವೃದ್ಧಿಗೆ ’ಮಾಸ್ಟರ್ ಪ್ಲಾನ್‘ ತಯಾರಿ

*ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೊ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿ

*ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಸಂಪರ್ಕ ಸಾಧಿಸುವ ದೃಷ್ಟಿಯಿಂದ ₹ 1,600 ಕೋಟಿ ವೆಚ್ಚದಲ್ಲಿ ವಿವಿಧ ವಿಮಾನ ನಿಲ್ದಾಣ ಅಭಿವೃದ್ದಿ

*ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಭೂಸ್ವಾಧೀನಕ್ಕೆ ಬಾಕಿ ಇರುವ ₹ 43 ಕೋಟಿ ಬಿಡುಗಡೆ

*ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ 2023-24ನೇ ಸಾಲಿನಲ್ಲಿ ₹ 55 ಕೋಟಿ ಬಿಡುಗಡೆ, ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ ₹ 30 ಕೋಟಿ ಬಿಡುಗಡೆ

*₹ 220 ಕೋಟಿ ವೆಚ್ಚದಲ್ಲಿ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಅನುದಾನ

*ರಾಜ್ಯದ ಮೂಲಸೌಕರ್ಯ ಯೋಜನೆಗಳನ್ನು ಖಾಸಗಿ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲು ಚಾಲ್ತಿಯಲ್ಲಿರುವ ಮೂಲಸೌಕರ್ಯ ಯೋಜನೆಗಳ ಪಿ.ಪಿ.ಪಿ. ನೀತಿ-2018ಕ್ಕೆ ಮಧ್ಯಂತರ ಪರಿಷ್ಕರಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT