ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೇನು? ಎಂಬುದರ ಮಾಹಿತಿ ಇಲ್ಲಿದೆ.

ಪ್ರಸ್ತುತ 250 ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ₹500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ ₹100 ಕೋಟಿ ಅನುದಾನ.

ಆಯ್ದ 100 ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು ₹100 ಕೋಟಿ.

ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ ₹1 ಸಾವಿರ ಕೋಟಿ ಅನುದಾನ.

ಮದರಸಾಗಳಲ್ಲಿನ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಸಿದ್ದತೆಗೆ ನೆರವು.

ವಕ್ಪ್ ಸಂಸ್ಥೆ ಆಸ್ತಿಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ ₹ 150 ಕೋಟಿ.

ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ₹2 ಕೋಟಿ ಅನುದಾನ.

169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ.

ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗೆ ಪ್ರತಿ ಜೋಡಿಗೆ ₹50 ಸಾವಿರ ಸಹಾಯಧನ.

ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಹಾಗೂ ಮಹಾಭೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯ ₹1 ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣ

ಅಲ್ಪಸಂಖ್ಯಾತ ಮಹಿಳೆಯರಿಗಾಗಿ 16 ಹೊಸ ಮಹಿಳಾ ಕಾಲೇಜುಗಳ ಸ್ಥಾಪನೆ.

ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ ₹100 ಕೋಟಿ ಅನುದಾನ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ ₹250 ಕೋಟಿ ಅನುದಾನ.

ಜೈನ ಅರ್ಚಕರು, ಸಿಖ್ಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ಗಳ ಮಾಸಿಕ ಗೌರವಧನ ₹6 ಸಾವಿರಗಳಿಗೆ ಹೆಚ್ಚಳ. ಸಿಖ್ಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳ ಮಾಸಿಕ ಗೌರವಧನ ₹5 ಸಾವಿರಕ್ಕೆ ಹೆಚ್ಚಳ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ. 50 ಪ್ರವೇಶ ಶುಲ್ಕ ಮರುಪಾವತಿಗೆ ಕ್ರಮ.

ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ₹30 ಲಕ್ಷಕ್ಕೆ ಹೆಚ್ಚಳ.

.Karnataka Budget: 26 ಹೋಬಳಿಗಳಲ್ಲಿ SC,ST ವಿದ್ಯಾರ್ಥಿಗಳಿಗೆ ವಸತಿ ಶಾಲೆ ಆರಂಭ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.