ಬೆಂಗಳೂರು: ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು 2025-26ನೇ ಸಾಲಿನ ಬಜೆಟ್ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೌಶಲ್ಯಾಭಿವೃದ್ಧಿ ಕ್ಷೇತ್ರ

ಯುವನಿಧಿ ಫಲಾನುಭವಿ ಯುವಕರಿಗೆ Industry Linkage Cell ಅಡಿ ಭವಿಷ್ಯ ಕೌಶಲ್ಯ ತರಬೇತಿ.

ರಾಜ್ಯದ ಯುವಕರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು CMKKY-2.0 ಜಾರಿ.

ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ CMKKY-2.0 ಯೋಜನೆಯಡಿ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ.

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳ ಆಯೋಜಿಸಲು ಕ್ರಮ.

ಬೆಂಗಳೂರು, ಕಲಬುರಗಿ, ಮಂಗಳೂರು, ಮತ್ತು ಬೆಳಗಾವಿ ಕೆಜಿಟಿಟಿಐ ಕೇಂದ್ರಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ Industry-4.0ಗೆ ಅನುಗುಣವಾಗಿ ಹೊಸ ಪ್ರಯೋಗಾಲಯ ಸ್ಥಾಪನೆ.

ʻನನ್ನ ವೃತ್ತಿ, ನನ್ನ ಆಯ್ಕೆʼ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ.

ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ India Skills-2026 ಸ್ಪರ್ಧೆ.

2 ಸಾವಿರ ಅಭ್ಯರ್ಥಿಗಳಿಗೆ ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳ ಅಲ್ಪಾವಧಿ ತರಬೇತಿ ನೀಡಲು ಕ್ರಮ.

ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸಲು ರಾಜ್ಯಮಟ್ಟದಲ್ಲಿ ʻಅಕ್ಕ ಕೋ-ಆಪರೇಟಿವ್ʼ ಸೊಸೈಟಿ ಸ್ಥಾಪನೆ.

ಮಹಿಳಾ ಸ್ವ-ಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗಾಗಿ ʻವಾತ್ಸಲ್ಯ ಕೇಂದ್ರʼಗಳ ಸ್ಥಾಪನೆ.

ರಾಜ್ಯದ 10 ನಗರಗಳಲ್ಲಿ ಪ್ರಾಯೋಗಿಕವಾಗಿ ಸ್ವಸಹಾಯ ಸಂಘಗಳ ಮೂಲಕ ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆ

ಪಿ.ಎಮ್. ಸ್ವ-ನಿಧಿ ಯೋಜನೆಯಡಿ ಸಾಲದ ಗರಿಷ್ಠ ಮಿತಿಯನ್ನು ತಲುಪಿರುವ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಣೆಗೆ ಪಡೆಯುವ ಒಂದು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ. 8 ರಷ್ಟು ಬಡ್ಡಿ ಸಹಾಯಧನ ಸೌಲಭ್ಯ.

₹25 ಕೋಟಿ ವೆಚ್ಚದಲ್ಲಿ ಸೇಡಂ ಸರ್ಕಾರಿ ITI ಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಉನ್ನತೀಕರಣ.

ಮಧುಗಿರಿ, ಇಂಡಿ, ಕಂಪ್ಲಿ, ರಾಯಚೂರು ಗ್ರಾಮೀಣ ಮತ್ತು ಸಿಂಧನೂರು ತಾಲ್ಲೂಕುಗಳಲ್ಲಿ ನೂತನ GTTC ಸ್ಥಾಪನೆ.

.Karnataka Budget: ಅಭಿವೃದ್ಧಿಯ 6 ಆಯಾಮ ಗುರುತಿಸಿ ಕಾರ್ಯಕ್ರಮ ಅನುಷ್ಠಾನ: ಸಿಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.