ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಲವು ಪ್ರಮುಖ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರಾವಳಿ ಪ್ರವಾಸೋದ್ಯಮಕ್ಕೆ ಒತ್ತು ನೀಡಿರುವ ಸರ್ಕಾರ, ಮುಳಯ್ಯನಗಿರಿಯಲ್ಲ ರೋಪ್ ವೇ ಯೋಜನೆ, ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿ ಹೊಂದಿದೆ.

ಪ್ರಮುಖ ಘೋಷಣೆಗಳು:

ಕರ್ನಾಟಕದ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼ ಘೋಷಣೆ. ಈ ತಾಣಗಳಲ್ಲಿ ವಾಯುಯಾನ ಹಾಗೂ ಜಲಸಾಹಸ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು.ಜೊತೆಗೆ Joy Ride ಹಾಗೂ River Cruise ಚಟುವಟಿಕೆಗಳನ್ನು ಪ್ರೋತ್ಸಾಹ.

ರಾಜ್ಯಕ್ಕೆ ಆಗಮಿಸುವ ಎಲ್ಲಾ ಪ್ರವಾಸಿಗರಿಗೆ ಸುಮಧುರ, ಸಕಾರಾತ್ಮಕ ಅನುಭವವನ್ನು ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೊ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗಳಿಗೆ ಮೃದು ಕೌಶಲ್ಯ ತರಬೇತಿ ನೀಡುವ ಮೂಲಕ ವೃತ್ತಿಪರತೆಯನ್ನು ವೃದ್ಧಿಗೊಳಿಸುವುದು. ಇದಕ್ಕಾಗಿ ₹1 ಕೋಟಿ ಮೀಸಲು.

ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್ ಅನ್ನು ಪ್ರಾರಂಭ.

ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಅಭಿವೃದ್ಧಿಪಡಿಸಲಾಗುವುದು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯಲ್ಲಿ ರೋಪ್-ವೇ ನಿರ್ಮಾಣ.

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ₹10 ಕೋಟಿ ಅನುದಾನ.

ರಾಜ್ಯದ ಸಂರಕ್ಷಿತ 844 ಸ್ಮಾರಕಗಳ ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಮಾಡುವ ಹಿತದೃಷ್ಟಿಯಿಂದ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡುವುದು.

ಭಾರತ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ UNESCO ಸಹಮತಿ ಪಡೆದು ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.