ಬೆಂಗಳೂರು: ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ ಅನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡನೆ ಮಾಡಿದ ಅವರು, ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಪ್ರಮುಖ ಘೋಷಣೆಗಳು:

ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ₹180 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.

ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ ₹100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ

ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪನೆ.

ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ₹15 ಕೋಟಿ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ₹1 ಕೋಟಿ.

ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ ₹10 ಕೋಟಿ ಅನುದಾನವನ್ನು ಒದಗಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.