ಬೆಂಗಳೂರು: ಶತಮಾನ ಕಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ ಮಾಡುವುದಾಗಿ ಮತ್ತು ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಏನೆಲ್ಲಾ ಘೋಷಣೆ:

ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ₹900 ಕೋಟಿ ಅನುದಾನ.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು.

ತೀವ್ರತರವಾದ ಅಪೌಷ್ಟಿಕತೆಯನ್ನು ಹೊಂದಿರುವ ಮಕ್ಕಳಿಗೆ ವೈದ್ಯಕೀಯ ಮತ್ತು ಪೌಷ್ಟಿಕಾಂಶದ ಚಿಕಿತ್ಸೆ ನೀಡಲು ಈಗಾಗಲೇ 86 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳು (NRC) ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಉಳಿದ 63 ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ₹6 ಕೋಟಿಗಳನ್ನು ಒದಗಿಸಲಾಗುವುದು.

ಟೈಪ್-1 ಮಧುಮೇಹದಿಂದ ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ಗಳನ್ನು ನೀಡಲಾಗುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು.

ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುವುದು.

ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳೊಂದಿಗೆ ಬದುಕುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆಯನ್ನು Pallium India ಸಂಸ್ಥೆಯ ಸಹಯೋಗದೊಂದಿಗೆ ನೀಡಲಾಗುವುದು.

ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ ₹20 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ.

ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲಾಗುವುದು.

ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು.

ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ ಮಾದರಿಯಲ್ಲಿ ಸ್ಥಾಪಿಸಲಾಗುವುದು.

ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ.

ವೈದ್ಯಕೀಯ ಶಿಕ್ಷಣ:

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ.

ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ₹180 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.

ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು.

ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ ₹100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ

ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪನೆ.

ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ₹15 ಕೋಟಿ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ₹1 ಕೋಟಿ ನೀಡಲಾಗುವುದು.

ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ ₹10 ಕೋಟಿ ಅನುದಾನವನ್ನು ಒದಗಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.