ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಮಡಿವಾಳ ಸಮುದಾಯ ಮತ್ತು ಸವಿತಾ ಸಮಾಜದವರನ್ನು ಪರಿಗಣಿಸಿ ಕೆಲ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ ₹75 ಲಕ್ಷ ಘಟಕ ವೆಚ್ಚದಲ್ಲಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.

ಅಲ್ಲದೇ, ಈ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರು ಸ್ವಂತ ಉದ್ಯೋಗಕ್ಕಾಗಿ ಆಧುನಿಕ ಲಾಂಡ್ರಿಗಳನ್ನು ಸ್ಥಾಪಿಸಲು ₹5 ಲಕ್ಷದ ವರೆಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದಿದ್ದಾರೆ.

ಸವಿತಾ ಸಮಾಜದವರು ಸಲೂನ್ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ ₹10 ಲಕ್ಷದ ವರೆಗೆ ಸಾಲ ಮತ್ತು ಸಹಾಯಧನವನ್ನು ಮಂಜೂರು ಮಾಡುವುದಾಗಿ ತಿಳಿಸಿದ್ದಾರೆ.

ಹಿಂದುಳಿತ ವರ್ಗಕ್ಕೆ ಘೋಷಿಸಿದ ಇತರ ಯೋಜನೆಗಳು:

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ₹30 ಕೋಟಿ ಘೋಷಣೆ. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ₹50 ಕೋಟಿ.

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ₹5 ಕೋಟಿ ಘಟಕ ವೆಚ್ಚದಲ್ಲಿ 50 ಸ್ವಂತ ಕಟ್ಟಡಗಳ ನಿರ್ಮಾಣ.

ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್ ಪದವೀಧರರಿಗೆ ಅವರ ತಾಂತ್ರಿಕ ಕೌಶಲ್ಯವನ್ನು ಉತ್ಕೃಷ್ಟಗೊಳಿಸಲು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಎಐಟಿ/ಐಐಟಿ/ಐಐಎಮ್ ಗಳಲ್ಲಿ ಎಐ ತರಬೇತಿ ಪಡೆಯಲು ತಲಾ ₹2 ಲಕ್ಷ ಸಾಲ.

ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚನೆ.

ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಲು ಉತ್ತೇಜಿಸುವ ಸಲುವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.