ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌ | ಅಮೃತ ನಗರೋತ್ಥಾನ, ಹೆದ್ದಾರಿ ಅಭಿವೃದ್ಧಿ ಯೋಜನೆಗೆ ₹7,385 ಕೋಟಿ

Last Updated 4 ಮಾರ್ಚ್ 2022, 12:14 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯನ್ನು ಮುಂದಿನ ಎರಡು ವರ್ಷಗಳಲ್ಲಿ ಅನುಷ್ಠಾನಗೊಳಿಸಲು ಬಜೆಟ್‌ನಲ್ಲಿ ₹3,885 ಕೋಟಿ ಅನುದಾನ ಒದಗಿಸಲಾಗಿದೆ.

*ಕೇಂದ್ರದ ‘ಅಮೃತ್‌ 2.0’ ಯೋಜನೆಯಡಿ ಆಯ್ದ ನಗರಗಳಿಗೆ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ರಾಜ್ಯಕ್ಕೆ ₹4,615 ಕೋಟಿ.

*ಸ್ವಚ್ಛ ಭಾರತ ಮಿಷನ್‌–2.0 ಅನುಷ್ಠಾನಕ್ಕೆ ಮುಂದಿನ 5 ವರ್ಷಗಳ ಅವಧಿಗೆ ಕೇಂದ್ರದಿಂದ ₹2,245 ಕೋಟಿ.

*ಶರಾವತಿ ಸಂಕೀರ್ಣದಲ್ಲಿ ಅಂದಾಜು ₹5,391 ಕೋಟಿ ವೆಚ್ಚದಲ್ಲಿ ಕೆಪಿಸಿಎಲ್‌ನಿಂದ 2 ಸಾವಿರ ಮೆ.ವ್ಯಾ.ಸಾಮರ್ಥ್ಯದ ಭೂಗರ್ಭ ವಿದ್ಯುತ್‌ ಕೇಂದ್ರ ಸ್ಥಾಪನೆ.

*ಕೆಪಿಟಿಸಿಎಲ್‌ನಿಂದ 64 ಹೊಸ ಉಪಕೇಂದ್ರಗಳ ಸ್ಥಾಪನೆ.

*ಗ್ರೀನ್‌ ಹೈಡ್ರೋಜನ್‌ ನೀತಿ ರೂಪಿಸಲು ಚಿಂತನೆ.

*8 ಜಿಲ್ಲೆಗಳಲ್ಲಿ ಸುಮಾರು 5 ಸಾವಿರ ಮೆ.ವ್ಯಾ.ಸಾಮರ್ಥ್ಯದ ಹೈಬ್ರಿಡ್‌ ಪಾರ್ಕ್‌ ಸ್ಥಾಪನೆ ಕಾರ್ಯಸಾಧ್ಯತೆ ಕುರಿತು ಪರಿಶೀಲನೆ.

ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಒತ್ತು

*ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ–4, ಘಟ್ಟ–2ರಡಿ ಒಟ್ಟು 2,275 ಕಿ.ಮೀ.ರಾಜ್ಯ ಹೆದ್ದಾರಿ ಅಭಿವೃದ್ಧಿಗೆ₹3,500 ಕೋಟಿ.

*1,008 ಕಿ.ಮೀ.ಉದ್ದದ ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ₹440 ಕೋಟಿ.

*₹927 ಕೋಟಿ ವೆಚ್ಚದ ಧಾರವಾಡ–ಕಿತ್ತೂರು–ಬೆಳಗಾವಿ ನೂತನ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ಕ್ರಮ.

*ಅಂದಾಜು ₹640 ಕೋಟಿ ವೆಚ್ಚದ 55 ಕಿ.ಮೀ.ಉದ್ದದ ಗದಗ–ಯಲವಿಗಿ ನೂತನ ರೈಲು ಮಾರ್ಗ ಯೋಜನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ.

*‌ಚೆನ್ನೈ–ಬೆಂಗಳೂರು–ಮೈಸೂರು ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಸಹಯೋಗ.

*ರಾಷ್ಟ್ರೀಯ ಹೆದ್ದಾರಿ ಅಕ್ಕಪಕ್ಕದ ನದಿಗಳ ಹೂಳೆತ್ತಲು ಮತ್ತು ಹೊಸ ಕೆರೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಹೊಸ ಯೋಜನೆ.

ರಾಯಚೂರಿನಲ್ಲಿ ವಿಮಾನ ನಿಲ್ದಾಣ

*ರಾಯಚೂರಿನಲ್ಲಿ ₹186 ಕೋಟಿ ವೆಚ್ಚದಲ್ಲಿ ಗ್ರೀನ್‌–ಫೀಲ್ಡ್‌ ವಿಮಾನ ನಿಲ್ದಾಣ.

*ದಾವಣಗೆರೆ ಹಾಗೂ ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕಾರ್ಯಸಾಧ್ಯತಾ ವರದಿ ತಯಾರಿ.

ಇವನ್ನೂ ಓದಿ:
ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ
Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ
Karnataka Budget 2022: ಬೆಂಗಳೂರಿಗೆ ಏನೇನು?
ಬೊಮ್ಮಾಯಿ ಬಜೆಟ್‌: ಕೃಷಿ ಕ್ಷೇತ್ರಕ್ಕೇನು ಕೊಡುಗೆ? ಇಲ್ಲಿದೆ ವಿವರ
Karnataka Budget: ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
ಬಜೆಟ್ ಪ್ರತಿ ಹಿಡಿದು ಮಿಂಚಿದ ಸಿಎಂ ಬೊಮ್ಮಾಯಿ
ಕರ್ನಾಟಕ ಬಜೆಟ್–2022: ತೆರಿಗೆ ದರದಲ್ಲಿ ಯಥಾಸ್ಥಿತಿ –ಸಿಎಂ ಬೊಮ್ಮಾಯಿ





*ಮೈಸೂರು ವಿಮಾನ ನಿಲ್ದಾಣದ ರನ್‌ ವೇ ವಿಸ್ತರಣೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT