ಭಾನುವಾರ, ಜುಲೈ 3, 2022
27 °C

Karnataka Budget: ಬೊಮ್ಮಾಯಿ ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು?

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಕೃಷಿವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಪಿಎಂ ಕಿಸಾನ್ ಯೋಜನೆಯಡಿಯ ರೈತರಿಗೆ ಅನುದಾನ, ರೈತರ ಆದಾಯ ಹೆಚ್ಚಿಸಲು ಸೆಕೆಂಡರಿ ಕೃಷಿ ವಿಶ್ವವಿದ್ಯಾಲಯಗಳ ಸ್ಥಾಪನೆ ಇದರಲ್ಲಿ ಸೇರಿವೆ.

ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು?

* ಕೃಷಿ ಮತ್ತು ಪೂರಕ ಚಟುವಟಿಕೆಗಳು: ₹33,700 ಕೋಟಿ

* ಪಿ.ಎಂ ಕಿಸಾನ್ ಯೋಜನೆಯಡಿಯಲ್ಲಿನ 50 ಲಕ್ಷಕ್ಕೂ ಅಧಿಕ ರೈತರಿಗೆ ಹೆಚ್ಚುವರಿಯಾಗಿ ₹ 1,978 ಕೋಟಿ ಅನುದಾನ.

* ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೈಗೆಟುಕುವಂತೆ ಮಾಡಲು ಹೋಬಳಿಗಳಿಗೆ ಕೃಷಿ ಯಂತ್ರಧಾರೆ ಕೇಂದ್ರ ವಿಸ್ತರಣೆ.

* ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ: ₹600 ಕೋಟಿ ಅನುದಾನ.

* ರೈತರ ಕೃಷಿ ಆದಾಯ ಹೆಚ್ಚಿಸುವ ಧ್ಯೇಯದೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ‘ಸೆಕೆಂಡರಿ ಕೃಷಿ ವಿಶ್ವವಿದ್ಯಾಲಯ’ ಸ್ಥಾಪನೆ.

* ರಾಜ್ಯದ 57 ತಾಲೂಕುಗಳಲ್ಲಿ 2.75 ಲಕ್ಷ ಹೆಕ್ಟೇರ್ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಪಾಯಿ ಯೋಜನೆ ಮತ್ತು ಜಲಾನಯನ ಅಭಿವೃದ್ಧಿ ಘಟಕ 2.0 ಸ್ಥಾಪನೆ.

* ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯ.

* ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆಯುವ ವಿಶಿಷ್ಟ ಭೌಗೋಳಿಕ ಸೂಚ್ಯಂಕ ಹೊಂದಿರುವ ತಗರಿಬೇಳೆಯನ್ನು ‘ಬೀಮಾ ಪಲ್ಸ್’ ಬ್ರಾಂಡ್‌ನಡಿ ಮಾರಾಟಕ್ಕೆ ಯೋಜನೆ.

*ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ನಿರ್ಧಾರ.

* ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ‘ಡಾ. ಎಸ್.ವಿ. ಪಾಟೀಲ್ ಕೃಷಿ ಸಂಶೋಧನೆ, ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ’ ಸ್ಥಾಪನೆ.

* ಕೃಷಿಯತ್ತ ಮಹಿಳೆಯರನ್ನು ಆಕರ್ಷಿಸಲು ಕೃಷಿ ಪಂಡಿತ ಪ್ರಶಸ್ತಿ.

* ತೋಟಗಾರಿಕೆ ಸಾಗುವಳಿ ಕ್ಷೇತ್ರವನ್ನು 34,700 ಹೆಕ್ಟೇರ್‌ಗೆ ವಿಸ್ತರಣೆ.

* ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇ.90ರಷ್ಟು ಹಾಗೂ ಇತರೆ ಸಮುದಾಯಕ್ಕೆ ಶೇ. 75ರಷ್ಟು ಸಬ್ಸಿಡಿ.

* ರಾಜ್ಯದಲ್ಲೇ ಅತಿ ಹೆಚ್ಚು ದ್ರಾಕ್ಷಿ ಬೆಳೆಯುವ ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ದ್ರಾಕ್ಷಾರಸ ಮಂಡಳಿಯ ಮೂಲಕ ಅತ್ಯಾಧುನಿಕ ಶೈತ್ಯಸಂಗ್ರಹ ಸೌಲಭ್ಯ.

* ‘ರಾಷ್ಟ್ರೀಯ ಖಾದ್ಯ ತೈಲಗಳು–ತಾಳೆ ಎಣ್ಣೆ’ ಅಭಿಯಾನದಡಿ ಯೋಜನೆಯನ್ನು ಮುಂದಿನ 5 ವರ್ಷಗಳಲ್ಲಿ 25 ಸಾವಿರ ಹೆಕ್ಟೇರ್‌ಗೆ ಹೆಚ್ಚಿಸುವ ಗುರಿ.

* ಕೊಡಗು ಮತ್ತು ಜಾಂಬೋಟ ಜೇನು ತುಪ್ಪಗಳನ್ನು ಜನಪ್ರಿಯಗೊಳಿಸಲು ಮತ್ತು ಉತ್ಪಾದನೆ ಹೆಚ್ಚಿಸಲು ಸುಧಾರಿತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಬ್ರ್ಯಾಂಡಿಂಗ್ ಮೂಲಕ ಜಾಗತಿಕ ಮಟ್ಟಕ್ಕೇರಿಸಲು 5 ಕೋಟಿ ರೂ. ಅನುದಾನ.

* ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆ ಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ.

* ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಎಲ್ಲ ರೇಷ್ಮೆ ಉತ್ಪನ್ನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸುಸಜ್ಜಿತ ತರಬೇತಿ ಕೇಂದ್ರ.

* ರೇಷ್ಟೆ ಬೆಳೆಗಾರರಿಗೆ ಪಾರದರ್ಶಕ ಮತ್ತು ನ್ಯಾಯಯುತ ಬೆಲೆ ಒದಗಿಸಲು ಎಲ್ಲ ರೇಷ್ಮೆಗೂಡು ಮಾರುಕಟ್ಟೆಗಳಲ್ಲಿe-Weighment ಮತ್ತು e-Payment ಅನುಷ್ಠಾನ.

* ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ಸೌಲಭ್ಯ ನೀಡಲು ‘ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್’ ಯೋಜನೆ.

* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಕ್ರಮ.

*ರಾಜ್ಯದಲ್ಲಿರುವ ಗೋವುಗಳ ರಕ್ಷಣೆಗೆ ಗೋಶಾಲೆಗಳ ಸಂಖ್ಯೆ 31 ರಿಂದ 100ಕ್ಕೆ ಹೆಚ್ಚಳ.

* ಗೋಶಾಲೆಗಳಲ್ಲಿ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ 11,000 ರೂ. ಮೊತ್ತಕ್ಕೆ ದತ್ತು ಪಡೆಯಲು ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆ.

* ‘ಅನುಗ್ರಹ ಕೊಡುಗೆ ಯೋಜನೆ‘ಯಡಿ ಆಕಸ್ಮಿಕವಾಗಿ ಮರಣ ಹೊಂದಿದ 3–6 ತಿಂಗಳ ಕುರಿ ಮತ್ತು ಮೇಕೆ ಮರಿಗಳಿಗೆ ನೀಡುವ ಪರಿಹಾರ ₹ 2,500ರಿಂದ ₹ 3,500ಕ್ಕೆ ಹೆಚ್ಚಳ.

* ಕುರಿ ಮತ್ತು ಮೇಕೆ ಸಾಕಾಣಿಕೆದಾರರು ಆಕಸ್ಮಿಕವಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ ₹ 5 ಲಕ್ಷ ರೂ. ವಿಮೆ ಸೌಲಭ್ಯ.

* ಆಳ ಸಮುದ್ರ ಮೀನುಗಾರಿಕೆ ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ‘ಮತ್ಸ್ಯ ಸಿರಿ’ ವಿಶೇಷ ಯೋಜನೆ.

* 5,000 ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತ ನಿಗಮದ ಮೂಲಕ ಮನೆಗಳ ನಿರ್ಮಾಣ.

* ಕೃಷಿಕರ ಬಹುದಿನಗಳ ಬೇಡಿಕೆಯಾಗಿದ್ದ ಯಶಸ್ವಿನಿ ಯೋಜನೆ ಮರು ಜಾರಿ. ಇದಕ್ಕಾಗಿ ₹ 300 ಕೋಟಿ ಅನುದಾನ.

* ಕೃಷ್ಣ ಮೇಲ್ದಂಡೆ ಯೋಜನೆಯ ಹಂತ–3ರ ಅನುಷ್ಠಾನಕ್ಕಾಗಿ ₹ 5,000 ಕೋಟಿ ಅನುದಾನ.

* ಮಹದಾಯಿ ಯೋಜನೆಯಡಿ ಹಂಚಿಕೆಯಾದ ನೀರಿನ ಬಳಕೆಗೆ ತಿರುವು ಯೋಜನೆಗಳಿಗೆ ₹1,000 ಕೋಟಿ ಅನುದಾನ.

* ಮೇಕೆ ದಾಟು ಯೋಜನೆ ಅನುಷ್ಠಾನಕ್ಕಾಗಿ ಈ ವರ್ಷ ₹ 1,000 ಕೋಟಿ ಅನುದಾನ.

* ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ₹ 3,000 ಕೋಟಿ ಅನುದಾನ.

* ರಾಜ್ಯದಲ್ಲಿ ನೀರಾವರಿ ಪ್ರದೇಶ ಹೆಚ್ಚಿಸಲು 8,774 ರೂ. ಹೊಸ ನೀರಾವರಿ ಯೋಜನೆಗಳು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು