ಬೆಂಗಳೂರು: 2026ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದಾರೆ. ಬೆಂಗಳೂರಿಗೆ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರಿಗೆ ಏನೆಲ್ಲಾ ಸಿಕ್ಕಿದೆ ಎಂಬುದನ್ನು ನೋಡುವುದಾದರೆ;

* ಬೆಂಗಳೂರಿನ ನಾಗರಿಕರಿಗೆ ಪಾರದರ್ಶಕ, ಜನಸ್ನೇಹಿ, ಸಹಭಾಗಿತ್ವವುಳ್ಳ ತುರ್ತು ಸ್ಪಂದನೆಯ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಮಹಾನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ.

* 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ₹3,000 ಕೋಟಿ ಅನುದಾನವನ್ನು ₹7,000 ಕೋಟಿಗೆ ಹೆಚ್ಚಳ.

* ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ 119 ಕೆರೆಗಳಿಗೆ ಏತ ನೀರಾವರಿ ಯೋಜನೆ.
.ಮಡಿವಾಳರಿಗೆ ಬೆಂಗಳೂರು, ಮೈಸೂರಿನಲ್ಲಿ ಲಾಂಡ್ರಿ;ಸಲೂನ್ಗಾಗಿ ಸವಿತಾ ಸಮಾಜಕ್ಕೆ ಸಾಲ.ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಹಾವೇರಿ ಜಿಲ್ಲೆಗೆ ಸಿಕ್ಕಿದ್ದೇನು? ಸಿಗಲಾರದ್ದೇನು?.
* ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.

* ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ₹1,255 ಕೋಟಿ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ಹೊತ್ತು.

* ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 175 ಜಂಕ್ಷನ್ಗಳ ಸೌಂದರ್ಯೀಕರಣ, 500 ಕಿ.ಮೀ. ಉದ್ದದ ಪಾದಚಾರಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಮತ್ತು 100 ಸ್ಕೈ ವಾಕ್ಗಳ ನಿರ್ಮಾಣ.

* ʻನಮ್ಮ ಮೆಟ್ರೊ’ ದೇಶದ ಎರಡನೇ ಅತಿದೊಡ್ಡ ಮೆಟ್ರೊ ರೈಲು ಜಾಲವಾಗಿದೆ. ಪ್ರಸ್ತುತ ಮೆಟ್ರೊ ಕಾರ್ಯಾಚರಣೆಯು 96 ಕಿ.ಮೀ. ಆಗಿದ್ದು, ಇದರಿಂದ ಪ್ರತಿ ದಿನ 10 ಲಕ್ಷ ಪ್ರಯಾಣಿಕರಿಗೆ ಪ್ರಯೋಜನವಾಗಿದೆ. ಇಲ್ಲಿಯವರೆಗೂ ವೆಚ್ಚವಾಗಿರುವ ₹67,460 ಕೋಟಿಗಳಲ್ಲಿ ರಾಜ್ಯ ಸರ್ಕಾರದ ಪಾಲು ₹59,376 ಕೋಟಿ ಆಗಿದೆ. ಕೇಂದ್ರ ಸರ್ಕಾರದ ಪಾಲು ₹8,084 ಕೋಟಿ ಆಗಿದೆ. ಇದು ರಾಜ್ಯ ಸರ್ಕಾರದ ಪಾಲಿನ ಶೇ 88ರಷ್ಟಿದ್ದರೆ, ಕೇಂದ್ರದ ಪಾಲು ಕೇವಲ ಶೇ12 ರಷ್ಟಿದೆ.
.ಇನ್ನೂ ಕೈಗೂಡದ ‘ಮಹದಾಯಿ’ ಯೋಜನೆ: ಬಜೆಟ್ನಲ್ಲಿ ಬೇಸರ ಹೊರಹಾಕಿದ ಸಿ.ಎಂ.ಕರ್ನಾಟಕವನ್ನು 15 ವರ್ಷ ಹಿಂದಕ್ಕೆ ತಳ್ಳುವ ಸಿದ್ದರಾಮಯ್ಯ ಬಜೆಟ್: ಬೊಮ್ಮಾಯಿ ಟೀಕೆ.
* 2026–27ರ ಹಣಕಾಸು ವರ್ಷದಲ್ಲಿ ಒಟ್ಟು 41 ಕಿ.ಮೀ. ಹೆಚ್ಚುವರಿ ಮೆಟ್ರೊ ಮಾರ್ಗಗಳನ್ನು ಪೂರ್ಣಗೊಳಿಸಲು ಯೋಜಿಸಲಾಗಿದೆ. ಇದರಿಂದ ದಿನಕ್ಕೆ 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

* ಬೆಂಗಳೂರು ನಗರದ ದಟ್ಟಣೆಯನ್ನು ಕಡಿಮೆ ಮಾಡಲು ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆಯನ್ನು ನಿರ್ಮಿಸಲಾಗುವುದು.

* ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ವರೆಗೆ ಸುರಂಗ ಮಾರ್ಗ ಹಾಗೂ ಮೇಲು ಸೇತುವೆ ರಸ್ತೆಯನ್ನು ₹2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಿದೆ.

* ಬೆಂಗಳೂರು ನಗರದ ಸುಮಾರು 1.40 ಕೋಟಿ ಜನರಿಗೆ ಕುಡಿಯುವ ನೀರು ಪೂರೈಸಲು ಕಾವೇರಿ ನೀರು ಸರಬರಾಜು ಯೋಜನೆಯಡಿ 1 ರಿಂದ 5ನೇ ಹಂತಗಳ ಒಟ್ಟು 2,225 ಎಂಎಲ್ಡಿ ನೀರು ಪೂರೈಸಲಾಗುತ್ತಿದೆ. ಇದೀಗ ಜಿಐಸಿಎ ನೆರವಿನಿಂದ ₹6,939 ಕೋಟಿ ವೆಚ್ಚದಲ್ಲಿ ಹೆಚ್ಚುವರಿಯಾಗಿ ಆರು ಟಿಎಂಸಿ. ನೀರನ್ನು ಪೂರೈಸಲು ಕಾವೇರಿ 6ನೇ ಹಂತದ ಯೋಜನೆಯನ್ನು ನಮ್ಮ ಸರ್ಕಾರದಿಂದ ರೂಪಿಸಲಾಗಿದೆ ಎಂದು ಸಿದ್ಧರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.
.ಈ ಸಾರಿಯ ರಾಜ್ಯ ಬಜೆಟ್ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕದ್ದೇನು?.ಒಳಮೀಸಲಾತಿ: ಪರಿಷ್ಕೃತ ರೋಸ್ಟರ್ ಬಿಂದು ಗುರುತಿಸಿ ನೇಮಕಾತಿ ಆರಂಭಿಸಲು ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.