ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget| ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಬಿಎಸ್‌ವೈ ನೀಡಿದ್ದೇನು?

Last Updated 5 ಮಾರ್ಚ್ 2020, 10:23 IST
ಅಕ್ಷರ ಗಾತ್ರ

ಬೆಂಗಳೂರು: ಇಂದು ಮಂಡನೆ ಆಗಿರುವ ರಾಜ್ಯ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಯೋಜನೆಗಳು ಷೋಷಣೆಯಾಗಿವೆ. ‌

ನವಜಾತ ಶಿಶುವಿನ ತೀವ್ರ ನಿಗಾ ಘಟಕ, ಸಿಮ್ಯುಲೇಷನ್ ಲ್ಯಾಬ್ ಮತ್ತು ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ, ಚರ್ಮ ಮತ್ತು ಸೌಂದರ್ಯವರ್ಧಕ ಶಾಸ್ತ್ರಗಳ ಸಂಸ್ಥೆ ನಿರ್ಮಾಣದಂತಹ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಬಿಎಸ್‌ವೈ ಯೋಜನೆಗಳು

*ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.

*ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.

*ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.

*ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT