ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್: ಮಹಿಳಾ ಕಾರ್ಮಿಕರಿಗೆ ₹500 ಸಹಾಯಧನ ಸೇರಿ ಮಹಿಳೆಯರಿಗೆ ಸಿಕ್ಕಿದ್ದು

Last Updated 18 ಫೆಬ್ರುವರಿ 2023, 4:45 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಕೆಲವೊಂದು ಯೋಜನೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಇಲ್ಲಿವೆ.

ಬೊಮ್ಮಾಯಿ ಬಜೆಟ್‌ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದು..

* ಶ್ರಮ ಶಕ್ತಿ ಎಂಬ ಹೊಸ ಯೋಜನೆ ಜಾರಿಗೆ ತಂದು ಭೂರಹಿತ ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ₹ 500 ಸಹಾಯಧನ ನೀಡಲಾಗುವುದು.

* ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ 'ವಿದ್ಯಾವಾಹಿನಿ' ಯೋಜನೆ ಅಡಿಯಲ್ಲಿ ₹ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್‌ ಸೌಲಭ್ಯ ನೀಡಲಾಗುತ್ತದೆ. ಇದು 8 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ.

* ಸಂಘಟಿತ ವಲಯದಲ್ಲಿ ದುಡಿಯುವ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಇದರಿಂದ 30 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದ್ದು, ಇದಕ್ಕಾಗಿ ₹1,000 ಕೋಟಿ ಒದಗಿಸಲಾಗುವುದು.

* ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವ ಸಹಾಯ ಗುಂಪುಗಳಿಗೆ ತಲಾ ₹1 ಲಕ್ಷದಂತೆ ₹500 ಕೋಟಿ ಸಮುದಾಯ ಬಂಡವಾಳ ನಿಧಿ ನೀಡಲು ನಿರ್ಧರಿಸಲಾಗಿದೆ.

* ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ ₹100 ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ ₹11,391 ಕೋಟಿ ಸಾಲ ಒದಗಿಸಲು ನಿರ್ಧಾರ.

* ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಯಲು ಆರೋಗ್ಯ ಪುಷ್ಟಿ ಯೋಜನೆಯಡಿ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ವಿತರಿಸಲು ಕ್ರಮ.

* ಆ್ಯಸಿಡ್ ದಾಳಿ ಮಹಿಳಾ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿ ರಹಿತ ಸಾಲ ನೀಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT