ಬೆಂಗಳೂರು: ದಾಖಲೆಯ 17ನೇ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.

15,000 ಬೋಧಕ ಹುದ್ದೆಗಳನ್ನು ಭರ್ತಿ:  2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ: ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿಆರ್ಸಿ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.
.Karnataka Budget: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ.
ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ।

ಉನ್ನತ ಶಿಕ್ಷಣ– 2,000 ಬೋಧಕ ಹುದ್ದೆಗಳ ಭರ್ತಿ: ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ.

ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು.

ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
.Karnataka Budget 2026| ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ; ಸುದೀರ್ಘ ಭಾಷಣ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.