ಬೆಂಗಳೂರು: ಮೇಕೆದಾಟು ಯೋಜನೆಗೆ ಹೊಸದಾಗಿ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ದಾಖಲೆಯ 17ನೇ ಬಜೆಟ್ ಮಂಡಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿಎಂಸಿ ಸಾಮರ್ಥ್ಯದ ಸಮತೋಲನಾ ಜಲಾಶಯ ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಉತ್ತರ ಕರ್ನಾಟಕದ ಆಲಮಟ್ಟಿ ಆಣೆಕಟ್ಟೆಯನ್ನು 519.6 ಮೀನಿಂದ 524.256 ಮೀ ಎತ್ತರಿಸುವ ಕಾಮಗಾರಿಯಿಂದ ಮುಳುಗಡೆಯಾಗುವ ಜಮೀನಿಗೆ ಪರಿಹಾರ ನೀಡಲು ದರ ಪರಿಷ್ಕರಿಸಲಾಗಿದೆ ಎಂದು ಹೇಳಿದರು.

ಮುಳುಗಡೆಯಾಗುವ ಕುಷ್ಕಿ ಜಮೀನಿಗೆ ಪ್ರತಿ ಎಕರೆಗೆ ₹30 ಲಕ್ಷ, ತರಿ ಜಮೀನಿಗೆ ಪ್ರತಿ ಎಕರೆಗೆ ₹40 ಲಕ್ಷ ಪರಿಹಾರ ನಿಗದಿ ಮಾಡಲಾಗುತ್ತದೆ. ತುಂಗಭದ್ರಾ ಆಣೆಕಟ್ಟೆಯ ಶಿಥಿಲಗೊಂಡಿರುವ 33 ಗೇಟ್ಗಳನ್ನು ಹೊಸ ಗೇಟ್ಗಳ ಅಳವಡಿಸಲು ಮುಂಗಾರಿನ ಮೊದಲು ಪರಿಹರಿಸಲಾಗುವುದು ಎಂದರು.

ಹೂಳು ತೆಗೆದು ನೀರಿನ ಸಂಗ್ರಹ ಹೆಚ್ಚಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಮಾಡಲಾಗುವುದು. ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ₹490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನಗೊಳಿಸುತ್ತೇವೆ ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ - ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಿರುವುದಾಗಿಯೂ ಅವರು ತಿಳಿಸಿದರು.

ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ ₹8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾನಗೊಳಿಸುತ್ತೇವೆ ಎಂದರು.
.Karnataka Budget 2026: ಬಜೆಟ್ ಮುಖ್ಯಾಂಶಗಳು .
ಸಣ್ಣ ನೀರಾವರಿ

₹237 ಕೋಟಿ ಅಂದಾಜು ವೆಚ್ಚದಲ್ಲಿ ಹೆಬ್ಬಾಳ-ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿ ಕೆರೆಯಿಂದ ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಅನುಷ್ಠಾನಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

₹140 ಕೋಟಿ ಅಂದಾಜು ಮೊತ್ತದಲ್ಲಿ ಎಚ್ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯ ಅನುಷ್ಠಾನಗೊಳಿಸುತ್ತೇವೆ ಎಂದು ಅವರು ಭರವಸೆ ನೀಡಿದರು.

₹650 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್ಡಿ ನೀರನ್ನು ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 41 ಕೆರೆಗಳನ್ನು ತುಂಬಿಸುವ ಯೋಜನೆಯ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ ₹25 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಆಧುನೀಕರಣ, ಅಣೆಕಟ್ಟು, ಪಿಕ್-ಅಪ್ & ಚೆಕ್ ಡ್ಯಾಂ ನಿರ್ಮಾಣ ಮಾಡುವುದಾಗಿ ಅವರು ಘೋಷಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಏತನೀರಾವರಿ, ಚೆಕ್ಡಾಂ, ಕೆರೆಗಳ ಪುನಶ್ಚೇತನ ಇತರೆ 112 ಕಾಮಗಾರಿಗಳ ಅನುಷ್ಠಾನಕ್ಕೆ ₹1,793 ಕೋಟಿ ಮೀಸಲಿಡಲು ಅನುಮೋದಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.