

ದಾಖಲೆಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ಈ ವರೆಗೆ 16 ಬಜೆಟ್‌ಗಳನ್ನು ಮಂಡಿಸಿದ್ದರು. ಇಂದು 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 4.48 ಲಕ್ಷ ಕೋಟಿಯಾಗಿದೆ.
ಪ್ರಜಾವಾಣಿ ಚಿತ್ರ

ಈ ಬಾರಿಯ ಬಜೆಟ್‌ನಲ್ಲಿ ಆರ್ಥಿಕತೆಯ ಜೊತೆಗೆ ಸಾಹಿತ್ಯ ಬೇರೆತದ್ದು ವಿಶೇಷವಾಗಿದೆ. ಬಜೆಟ್‌ನ ಭಾಷಣದಲ್ಲಿ ಹಲವು ಕವಿಗಳ ಪದ್ಯದ ಸಾಲುಗಳು ಹಾಗೂ ವಚನಕಾರರ ವಚನಗಳನ್ನು ಉಲ್ಲೇಖಿಸಿ ಸಿದ್ದರಾಮಯ್ಯನವರು ಭಾಷಣವನ್ನು ಮಂಡಿಸಿದ್ದಾರೆ.
ಪ್ರಜಾವಾಣಿ ಚಿತ್ರ

1995ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಇವರು ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ್ದಾರೆ.
ಪ್ರಜಾವಾಣಿ ಚಿತ್ರ

2026 ಬಜೆಟ್‌ನಲ್ಲಿ ಪ್ರಮುಖವಾಗಿ ಶಿಕ್ಷಣಕ್ಕೆ ₹47,224 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ₹34,929 ಕೋಟಿ,
ಇಂಧನ ಇಲಾಖೆಗೆ ₹29,947 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ಗೆ ₹26,559 ಕೋಟಿ,
ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆಗೆ ₹23,100 ಕೋಟಿ ಹಾಗೂ ನೀರಾವರಿ ಇಲಾಖೆಗೆ ₹22,436 ಕೋಟಿ ಬಜೆಟ್ ಮಂಡಿಸಲಾಗಿದೆ.
ಪ್ರಜಾವಾಣಿ ಚಿತ್ರ

ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ ₹22,203 ಕೋಟಿ, ಕಂದಾಯ ಇಲಾಖೆಗೆ ₹19,843 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ ₹18,612 ಕೋಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಗೆ ₹17,817 ಕೋಟಿ, ಗೃಹ ಇಲಾಖೆಗೆ, ₹11,424 ಕೋಟಿ
ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ₹8,373 ಕೋಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ₹7,942
ಪಶಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ ₹4084 ಕೋಟಿ ಹಾಗೂ ಇತರೆ ವಲಯಗಳಿಗೆ ₹1,72,757 ಕೋಟಿ ಮೀಸಲಿಡಲಾಗಿದೆ.
ಪ್ರಜಾವಾಣಿ ಚಿತ್ರ

ಈ ಬಾರಿಯ ಬಜೆಟ್‌ನಲ್ಲಿ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆ, ತೋಟಗಾರಿಕೆ ಆಧಾರಿತ ಕೈಗಾರಿಕೆಗಳ ಸ್ಥಾಪನೆ, ಸಿಲ್ಕ್ ಪಾರ್ಕ್‌ಗಳ ಸ್ಥಾಪನೆ, ಪಶುವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ, ಮತ್ತ್ವದರ್ಶಿನಿಗಳ ಸ್ಥಾಪನೆ, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಈ ಬಜೆಟ್ ಮೀಸಲಿಡಲಾಗಿದೆ.
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.