ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುಗೆ; ಸೇವೆ ಆಧಾರದಲ್ಲಿ ಗೌರವಧನ ಹೆಚ್ಚಳ

Last Updated 4 ಮಾರ್ಚ್ 2022, 9:47 IST
ಅಕ್ಷರ ಗಾತ್ರ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುತ್ತಿರುವ ಗೌರವಧನವನ್ನು ಸೇವೆಯ ಆಧಾರದ ಮೇಲೆ ಹೆಚ್ಚಿಸಲು ನಿರ್ಧರಿಸಿರುವುದಾಗಿ ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.

20 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರಿಗೆ ₹ 1500, 10-20 ವರ್ಷ ಸೇವೆ ಸಲ್ಲಿಸಿದವರಿಗೆ ₹ 1250 ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೆ ₹ 1000 ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

2015ರಿಂದ ಸ್ಥಗಿತಗೊಂಡಿದ್ದ ಎನ್‌ಪಿಎಸ್ ಲೈಟ್ ಯೋಜನೆಯಿಂದ ವಂಚಿತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ 50 ಸಾವಿರ ಮತ್ತು ಅಂಗನವಾಡಿ ಸಹಾಯಕರಿಗೆ 30 ಸಾವಿರ ಪಾವತಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ದುಡಿಯುವ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ರಾಜ್ಯದ 5 ತಾಲ್ಲೂಕುಗಳಲ್ಲಿ ಮಹಾತ್ಮಾ ಗಾಂಧಿ ಎನ್‌ಆರ್‌ಇಜಿಎ ಯೋಜನೆಯ ಸಹಯೋಗದಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು. ಇದರಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT