ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2022| ಬೆಳೆ ಮೌಲ್ಯಮಾಪನಕ್ಕೆ ‘ಕಿಸಾನ್‌ ಡ್ರೋನ್‌’

Last Updated 1 ಫೆಬ್ರುವರಿ 2022, 10:51 IST
ಅಕ್ಷರ ಗಾತ್ರ

ನವದೆಹಲಿ: ಬೆಳೆ ಮೌಲ್ಯಮಾಪನ, ಭೂ ದಾಖಲೆಗಳು ಮತ್ತು ಕೀಟನಾಶಕಗಳ ಸಿಂಪಡಣೆಗಾಗಿ ‘ಕಿಸಾನ್ ಡ್ರೋನ್‌’ಗಳನ್ನು ಬಳಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ ಕೇಂದ್ರ ಬಜೆಟ್‌ ಮಂಡಿಸಿದರು. ‘ಬೆಳೆ ಮೌಲ್ಯಮಾಪನ, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗಾಗಿ ಕಿಸಾನ್ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಕೃಷಿ ವಲಯದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುವ ನಿರೀಕ್ಷೆ ಇದೆ’ ಎಂದು ಅವರು ಬಜೆಟ್ ಭಾಷಣದ ವೇಳೆ ತಿಳಿಸಿದರು.

ಗಂಗಾ ಕಾರಿಡಾರ್‌ನಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲಾಗುವುದು ಎಂದು ಹಣಕಾಸು ಸಚಿವರು ಇದೇ ವೇಳೆ ಹೇಳಿದರು. ನೈಸರ್ಗಿಕ ಕೃಷಿ ಆರಂಭವಾದರೆ ಅಂತರ್ಜಲ ಕಲುಷಿತಗೊಳ್ಳುವುದು ತಪ್ಪಲಿದೆ. ಕೃಷಿಯಲ್ಲಿ ರಸಗೊಬ್ಬರಗಳ ಬಳಕೆ ಕಡಿಮೆಯಾದರೆ ಗಂಗೆಗೆ ರಾಸಾಯನಿಕಗಳು ಸೇರುವುದೂ ತಪ್ಪಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT