ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌: ಸಲಹೆ ಆಹ್ವಾನಿಸಿದ ಪ್ರಧಾನಿ ಮೋದಿ

Last Updated 9 ಜನವರಿ 2020, 12:52 IST
ಅಕ್ಷರ ಗಾತ್ರ

ಬೆಂಗಳೂರು: 2020–21ನೇ ಹಣಕಾಸು ವರ್ಷದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.

2019–20ರ ಹಣಕಾಸು ವರ್ಷದ ಆರ್ಥಿಕ ವೃದ್ಧಿ ದರವು ಸಾಧಾರಣ ಮಟ್ಟವಾದ ಶೇ 5ರಷ್ಟು ಇರಲಿದೆ ಎಂದು ಸರ್ಕಾರವೇ ಪೂರ್ವಭಾವಿಯಾಗಿ ಅಂದಾಜಿಸಿದೆ. ಇದು 11 ವರ್ಷಗಳ ಹಿಂದಿನ ಕನಿಷ್ಠ ಮಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದ ಬಜೆಟ್‌ನಿಂದ ತಾವು ಏನನ್ನು ನಿರೀಕ್ಷಿಸುತ್ತೇವೆ. ತಮ್ಮ ಅಪೇಕ್ಷೆಗಳು ಮತ್ತು ಆಶಯಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮೋದಿ ಅವರು ಮನವಿ ಮಾಡಿಕೊಂಡಿದ್ದಾರೆ.

‘ಕೇಂದ್ರ ಸರ್ಕಾರದ ಬಜೆಟ್‌, ದೇಶದ 130 ಕೋಟಿ ಜನರ ಆಸೆ – ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತಿದ್ದು, ದೇಶದ ಆರ್ಥಿಕ ಪ್ರಗತಿಯ ಪಥ ನಿರ್ಮಿಸುತ್ತದೆ. ನೀವೆಲ್ಲರು ನಿಮ್ಮ ಚಿಂತನೆ ಮತ್ತು ಸಲಹೆಗಳನ್ನು ಸರ್ಕಾರದ ಜತೆ ಹಂಚಿಕೊಳ್ಳಲು ಆಹ್ವಾನಿಸುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಈಗಾಗಲೇ ಸಾರ್ವಜನಿಕರಲ್ಲಿ ಇದೇ ಬಗೆಯ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT