ಬುಧವಾರ, ಮೇ 18, 2022
27 °C

ಬಜೆಟ್‌ಗೂ ಮುನ್ನ ಪೂಜೆ ನೆರವೇರಿಸಿದ ಅನುರಾಗ್ ಠಾಕೂರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ಸಂಕಷ್ಟದ ಬಳಿಕ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಈ ಮಧ್ಯೆ, ಬಜೆಟ್ ಮಂಡನೆಗೂ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ಸಲ್ಲಿಸಿದ್ದಾರೆ. 

ಇದನ್ನೂ ಓದಿ.. ಕೇಂದ್ರ ಬಜೆಟ್–2021 ಕನ್ನಡದಲ್ಲಿ ಲೈವ್ ಅಪ್‌ಡೇಟ್

ಬಳಿಕ ಬೆಳಗ್ಗೆಯೇ ಕಚೇರಿಗೆ ಆಗಮಿಸಿರುವ ಅವರು ಬಜೆಟ್ ಮಂಡನೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ ವೇಳೆ, ಅನುರಾಗ್ ಠಾಕೂರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಹಕಾರ ನೀಡಲಿದ್ದಾರೆ.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅನುರಾಗ್‌ ಠಾಕೂರ್‌, 'ಬಜೆಟ್ ಜನರ ನಿರೀಕ್ಷೆಗೆ ಅನುಗುಣವಾಗಿರುತ್ತದೆ. 'ಸಬ್‌ ಕಾ ಸಾಥ್‌, ಸಬ್‌ಕಾ ವಿಕಾಸ್, ಸಬ್‌ ಕಾ ವಿಶ್ವಾಸ್' ಮಂತ್ರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸರ್ಕಾರವು 'ಆತ್ಮನಿರ್ಭರ ಭಾರತ' ಪ್ಯಾಕೇಜ್ ಘೋಷಿಸುವ ಮೂಲಕ ದೇಶಕ್ಕೆ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ. ಈ ಕಾರ್ಯಕ್ರಮ ಕೋವಿಡ್‌ ಸಾಂಕ್ರಾಮಿಕದಿಂದ ದೇಶವನ್ನು ರಕ್ಷಿಸುತ್ತದೆ ಮತ್ತು ಆರ್ಥಿಕತೆಯನ್ನು ಶೀಘ್ರವಾಗಿ ಹಳಿಗೆ ತರುತ್ತದೆ,' ಎಂದು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು