ಮೈಸೂರು: ‘ಈ ಬಾರಿಯ ಬಜೆಟ್ ಅಧಿವೇಶನದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಹಿತಕ್ಕಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟಿದೆ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬಜೆಟ್ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳಲ್ಲಿ ಯಾವುದನ್ನೂ ವಿರೋಧಿಸಲಾಗದೆ ವಿಪಕ್ಷಗಳು ಮೂಲ ಚರ್ಚೆಯಲ್ಲೇ ವಿಫಲಗೊಂಡಿರುವುದು ಎದ್ದು ಕಾಣುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಸದನದ ಅಷ್ಟೂ ಸಮಯ, ವಿಪಕ್ಷ ನಾಯಕರು ತಾಳಮೇಳ ಹೊಂದಾಣಿಕೆ ಇಲ್ಲದ ಹೇಳಿಕೆಗಳನ್ನು ನೀಡಿ ಅನಗತ್ಯ ವಿಚಾರ ಮುಂದಿಟ್ಟು ಕಾಲ ಕಳೆದಿದ್ದಾರೆ. ಇದು ಬಜೆಟ್ನಲ್ಲಿ ಯಾವುದೇ ಹುಳುಕಿಲ್ಲ, ಇದು ಜನಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಪಡಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

‘ಸಿದ್ದರಾಮಯ್ಯ ಆಡಳಿತದಲ್ಲಿ ಲೋಪ ಇಲ್ಲ ಎನ್ನುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-39-471968123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.