ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕೇಂದ್ರದ ಮಧ್ಯಂತರ ಬಜೆಟ್‌ ಮಂಡನೆ

Published 31 ಜನವರಿ 2024, 16:29 IST
Last Updated 31 ಜನವರಿ 2024, 16:29 IST
ಅಕ್ಷರ ಗಾತ್ರ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ 2024–25ನೇ ಹಣಕಾಸು ವರ್ಷದ ಕೇಂದ್ರದ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ.

ನಿರ್ಮಲಾ ಅವರು ಮಂಡಿಸುತ್ತಿರುವ ಆರನೇ ಬಜೆಟ್‌ ಇದಾಗಿದೆ. ಆ ಮೂಲಕ ಆರು ಬಾರಿ ಬಜೆಟ್‌ ಮಂಡಿಸಿರುವ ಮಾಜಿ ಪ್ರಧಾನಿ ದಿವಂಗತ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ.

ಮಧ್ಯಂತರ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆಗಳನ್ನು ಪ್ರಕಟಿಸುವುದಿಲ್ಲ ಎಂದು ಈಗಾಗಲೇ ಅವರು ಹೇಳಿದ್ದಾರೆ. ಹಾಗಾಗಿ, ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿಯಡಿ ತೆರಿಗೆದಾರರಿಗೆ ಯಾವುದೇ ವಿನಾಯಿತಿ ಪ್ರಕಟಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್‌ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಗೆ ಚುನಾವಣೆ ಘೋಷಣೆಯಾಗಲಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹೊಸ ಸರ್ಕಾರವು ಪೂರ್ಣ ಬಜೆಟ್‌ ಮಂಡಿಸುವ ಸಾಧ್ಯತೆಯಿದೆ ಎಂದು ತಿಳಿಸಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT