ಬುಧವಾರ, ಫೆಬ್ರವರಿ 19, 2020
27 °C

ಬಜೆಟ್ 2020: ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಸಾಧನಗಳ ನಿರ್ಮಾಣಕ್ಕೆ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Nirmala

ನವದೆಹಲಿ: ಬಜೆಟ್ 2020 ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಮೊಬೈಲ್ ಫೋನ್‌, ಸೆಮಿ ಕಂಡಕ್ಟರ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳ ನಿರ್ಮಾಣಕ್ಕಾಗಿರುವ ಯೋಜನೆ ಪ್ರಸ್ತಾಪಿಸಿದ್ದಾರೆ.

ಎಲೆಕ್ಟ್ರಾನಿಕ್ ಉತ್ಪನ್ನಗಳ ನಿರ್ಮಾಣದಲ್ಲಿ ಹೂಡಿಕೆ ಮತ್ತು ದೇಶದಲ್ಲಿ ನಿರ್ಮಾಣವಾಗುವ ಉತ್ಪನ್ನಗಳಿಗೆ ಉತ್ತೇಜನ ನೀಡಬೇಕಾಗಿದೆ ಎಂದು ಹೇಳಿದ ಸಚಿವೆ ಪ್ರತಿಯೊಂದು ಜಿಲ್ಲೆಯನ್ನು ರಪ್ತುಕೇಂದ್ರವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದಿದ್ದಾರೆ.

* ರಾಜ್ಯ ಮಟ್ಟದಲ್ಲಿ ಇದಕ್ಕೆ ಅನುಮತಿ ನೀಡುವ ಮತ್ತು ಹೂಡಿಕೆ ಮಾಡುವವರಿಗೆ ಉಚಿತವಾಗಿ ಸಲಹೆ ನೀಡುವ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಸರ್ಕಾರದ್ದು.

*  ಮೀನು ಉತ್ಪಾದನೆಯಲ್ಲಿ ಹೊಸ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗುವುದು. ಸಾಗರ್ ಮಿತ್ರ ಯೋಜನೆ ಮತ್ತು ಮೀನು ಉತ್ಪಾದಕ ಸಂಸ್ಥೆಗಳ ಮೂಲಕ ಗ್ರಾಮೀಣ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಗಳಿಕೆ.‌  

*  ಮೀನು ಕೃಷಿ ಮಾಡುವವರ 500  ಸಂಘಟನೆಗಳನ್ನು ಸ್ಥಾಪಿಸಲಾಗುವುದು.

*  2025ರ ವೇಳೆಗೆ  ಹಾಲು ಸಂಸ್ಕರಣೆಯ ಸಾಮರ್ಥ್ಯ ದ್ವಿಗುಣಗೊಳಿಸಲಾಗುವುದು

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು