ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2022: ನಲ್ಲಿ ನೀರು ಪೂರೈಕೆಗೆ ₹ 60 ಸಾವಿರ ಕೋಟಿ

Last Updated 1 ಫೆಬ್ರುವರಿ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿಯೊಂದು ಮನೆಗೂ ಶುದ್ಧವಾದ ಕುಡಿಯುವನೀರು ಒದಗಿಸುವ ‘ಹರ್‌ ಘರ್‌ನಲ್ ಸೇ ಜಲ್’ ಯೋಜನೆ ಅಡಿಯಲ್ಲಿ 2022–23ನೇ ಸಾಲಿನಲ್ಲಿ 3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲು ₹60ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ ತಿಳಿಸಿದ್ದಾರೆ.

ಈ ಯೋಜನೆಯು ಪ್ರಸ್ತುತ 8.7 ಕೋಟಿ ಕುಟುಂಬಗಳ ವ್ಯಾಪ್ತಿಯನ್ನು ಹೊಂದಿದ್ದು, ಕಳೆದೆರಡು ವರ್ಷಗಳಲ್ಲಿ 5.5 ಕೋಟಿ ಕುಟುಂಬಗಳಿಗೆಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

80 ಲಕ್ಷ ಮನೆ: ಪ್ರಧಾನ ಮಂತ್ರಿಆವಾಸ್‌ ಯೋಜನೆ ಅಡಿಯಲ್ಲಿ 2022–23ನೇ ಸಾಲಿನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗುರುತಿಸಲಾಗಿರುವ ಫಲಾನುಭವಿಗಳಿಗೆ 80 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ವಿತರಿಸಲಾಗುವುದು ಎಂದು ಹಣಕಾಸು ಸಚಿವೆ ತಿಳಿಸಿದ್ದಾರೆ. ಇದಕ್ಕಾಗಿ ₹48 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ ಎಂದೂ ಘೋಷಿಸಿದ್ದಾರೆ.

ನಗರ ಪ್ರದೇಶದ ಮಧ್ಯಮ ವರ್ಗ ಮತ್ತು ಆರ್ಥಿಕವಾಗಿ ದುರ್ಬಲರಾದವರಿಗೆ ಮನೆ ನಿರ್ಮಾಣದ ವೇಳೆ ಭೂಮಿ ಮತ್ತು ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ ಪಡೆಯಲು ತಗಲುವ ಕಾಲಾವಧಿಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಕೆಲಸ ಮಾಡಲಿದೆ ಎಂದೂ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇವನ್ನೂ ಓದಿ
*

*
*
*
*
*
*
*
*
*
*
*
*
*
*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT