ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ಗೆ ಎನ್‌ಎಸ್‌ಇ ಸಿಇಒ ಸ್ವಾಗತ

Last Updated 3 ಫೆಬ್ರುವರಿ 2023, 11:21 IST
ಅಕ್ಷರ ಗಾತ್ರ

ಬೆಂಗಳೂರು: ‘ಬಂಡವಾಳ ವೃದ್ಧಿ ತೆರಿಗೆಯನ್ನು ಹೆಚ್ಚಿಸಬಹುದು ಎಂಬ ಆತಂಕವು ಕೇಂದ್ರ ಬಜೆಟ್‌ ಮಂಡನೆಗೂ ಮೊದಲು ಹೂಡಿಕೆದಾರರಲ್ಲಿ ಇತ್ತು. ಆದರೆ ಈ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಇರುವುದು ಹೂಡಿಕೆದಾರರ ಮೇಲೆ ಧನಾತ್ಮಕ ಪರಿಣಾಮ ಬೀರಿದೆ’ ಎಂದು ರಾಷ್ಟ್ರೀಯ ಷೇರುಪೇಟೆಯ (ಎನ್‌ಎಸ್‌ಇ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಶಿಷ್‌ ಕುಮಾರ್ ಚೌಹಾಣ್ ಹೇಳಿದ್ದಾರೆ.

‘ಇದು ಬೆಳವಣಿಗೆಗೆ ಪೂರಕವಾಗಿರುವ ಬಜೆಟ್. ಮೂಲಸೌಕರ್ಯ ಹಾಗೂ ಉದ್ಯೋಗ ಸೃಷ್ಟಿಗೆ ಇದರಲ್ಲಿ ಆದ್ಯತೆ ನೀಡಲಾಗಿದೆ. ಸರ್ಕಾರದ ವಿತ್ತೀಯ ಕೊರತೆಯನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಶೇಕಡ 5.9ಕ್ಕೆ ತಗ್ಗಿಸುವುದಾಗಿ ಹೇಳಲಾಗಿದೆ. ಅಂದರೆ, ಮುಂದಿನ ಮೂರು ವರ್ಷಗಳಲ್ಲಿ ವಿತ್ತೀಯ ಕೊರತೆಯನ್ನು ಶೇ 4.5ಕ್ಕೆ ಇಳಿಸಲು ಇದು ಒಂದು ಮಾರ್ಗ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT