ಸೋಮವಾರ, ಜುಲೈ 4, 2022
25 °C

ಮೋದಿ ಭಾಷಣ ಸರ್ಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತಿತ್ತು: ಖರ್ಗೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇಂದಿನಿಂದ (ಜ.31, ಸೋಮವಾರ) ಬಜೆಟ್ ಅಧಿವೇಶನ (2022) ಆರಂಭವಾಗಿದೆ. ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳೊಂದಿಗೆ ಮಾತನಾಡಿ, ಸದನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ವಿಪಕ್ಷಗಳನ್ನು ವಿನಂತಿ ಮಾಡಿದರು.

ಪ್ರಧಾನಿ ಮೋದಿ ಭಾಷಣವನ್ನು ತರಾಟೆಗೆ ತೆಗೆದುಕೊಂಡಿರುವ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ತಮ್ಮ ಭಾಷಣದಲ್ಲಿ 2014ರಿಂದ ಸರ್ಕಾರದ ಸಾಧನೆಗಳನ್ನು ಮಾತ್ರ ಎತ್ತಿ ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: 

 

 

'ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಚೀನಾದ ಅತಿಕ್ರಮಣ, ಹಣದುಬ್ಬರ, ನಿರುದ್ಯೋಗ, ರೈಲ್ವೆ ನೇಮಕಾತಿ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ. ಅವರ (ಪ್ರಧಾನಿ) ಮಾತಿನಲ್ಲಿ ಪ್ರಮುಖವಾದ ವಿಷಯಗಳೇನು ಇರಲಿಲ್ಲ. ಇದು ಸರ್ಕಾರದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ' ಎಂದು ಆರೋಪಿಸಿದರು.

 

ಬಜೆಟ್ ಅಧಿವೇಶನದಲ್ಲಿ ಪೆಗಾಸಸ್ ಕುತಂತ್ರಾಂಶ ಖರೀದಿ, ಕೃಷಿಕರ ಸಮಸ್ಯೆ, ಗಡಿಯಲ್ಲಿ ಚೀನಾದ ಅತಿಕ್ರಮಣ ಮುಂತಾದ ವಿಷಯಗಳ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಜ್ಜಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು